ನ್ಯೂಸ್ ನಾಟೌಟ್ : ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ.ಮಿಥುನ್ (14) ಎಂಬಾತ ಮೃತ ಬಾಲಕ ಎಂದು ತಿಳಿದು ಬಂದಿದೆ.
ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿ ಪುತ್ರ ಮೃತ ಮಿಥುನ್ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ತೀವ್ರ ಮಳೆ ಇದ್ದ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ವಿದ್ಯಾರ್ಥಿ ಮಿಥುನ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.