ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28ರಂದು ನಡೆದಿದೆ. ಹುಣ್ಸಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿಯಾದ ದೀಕ್ಷಿತ ಶೆಟ್ಟಿ(23.ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.