ಕರಾವಳಿಬೆಂಗಳೂರು

ವಿಜಯ್ ಪತ್ನಿ ಸ್ಪಂದನಾ ಹೃದಯಾಘಾತದಲ್ಲಿ ಸಾವನ್ನಪ್ಪಿದ ಬೆನ್ನಲ್ಲೇ 16 ವರ್ಷದ ಬಾಲಕಿಗೆ ಹೃದಯಾಘಾತ, SSLC ವಿದ್ಯಾರ್ಥಿನಿಗೆ ಏನಾಯ್ತು?

ನ್ಯೂಸ್ ನಾಟೌಟ್ : ವಿಜಯ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ(Spandana Vijay Raghavendra) ಅವರು ಹೃದಯಾಘಾತದಿಂದ (Heart attack) ಮೃತಪಟ್ಟಿರುವ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ. ಇಷ್ಟು ಸಣ್ಣ ವಯಸ್ಸಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದು,ಮನಸ್ಸಿಗೆ ಆಘಾತವನ್ನುಂಟು ಮಾಡಿದೆ.ಇದರ ನಡುವೆ ಕೇವಲ 16 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಪ್ರಾಣ (SSLC student dies of heart attack) ಕಳೆದುಕೊಂಡಿದ್ದು, ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿದೆ.

ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫೆಲಿಶಾ (16) ಮೃತ ಬಾಲಕಿ. ಬೆಂಗಳೂರು ನಿವಾಸಿಗಿರುವ ಫೆಲಿಶಾ ಗುಂಡ್ಲುಪೇಟೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಬುಧವಾರ ಬೆಳಗ್ಗೆ ವಾಯು ವಿಹಾರ ಮಾಡುವ ವೇಳೆ ಒಮ್ಮಿಂದೊಮ್ಮೆಗೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾಳೆಂದು ತಿಳಿದು ಬಂದಿದೆ.

ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದ ಆಕೆಯನ್ನು ಕೂಡಲೇ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರೆ, ಚಿಕಿತ್ಸೆ ಫಲಿಸದೆ ಸಾವು ಸಂಭವಿಸಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Related posts

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆ ಹಿನ್ನೆಲೆ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ..!, 18 ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ

ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ !

ಮಹಿಳೆಯರ ಸರ ಕದ್ದಿಯುತ್ತಿದ್ದ ಖತರ್ನಾಕ್ ಕಳ್ಳರು ಅಂದರ್‌