ಕ್ರೈಂ

ಮಂಗಳೂರು: ಲೈಂಗಿಕ ದೌರ್ಜನ್ಯ ಎಸಗಿ 8 ವರ್ಷದ ಬಾಲಕಿಯ ಹತ್ಯೆ

1.1k

ಮಂಗಳೂರು: ಹಂಚು ಮತ್ತು ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಾರ್ಖಂಡ್ ಮೂಲದ ದಂಪತಿಗಳ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಅಮಾನುಷ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಏನಿದು ಘಟನೆ?

ಪರಾರಿ ಎಂಬಲ್ಲಿ ರಾಜ್ ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆ ಕಾರ್ಯಾಚರಿಸುತ್ತಿದ್ದು , ಇಲ್ಲಿ ರಾಜ್ಯ, ಹೊರರಾಜ್ಯದ ಪುರುಷ ಮತ್ತು ಮಹಿಳಾ ಕಾರ್ಮಿಕರೂ ದುಡಿಯುತ್ತಿದ್ದಾರೆ. ಈ ಪೈಕಿ ಜಾರ್ಖಂಡ್ ಮೂಲದ ಮಹಿಳೆಯೋರ್ವರ 8 ವರ್ಷದ ಹೆಣ್ಣು ಮಗು ಭಾನುವಾರ ಸಂಜೆಯಿಂದ ನಾಪತ್ತೆಯಾಗಿತ್ತು. ಮಧ್ಯಾಹ್ನದ ವೇಳೆಗೆ ಮಗು ನಾಪತ್ತೆಯಾಗಿದ್ದು, ಕೆಲಸದಲ್ಲಿದ್ದ ತಂದೆ ತಾಯಿಗೆ ಸಂಜೆ ನಾಲ್ಕು ಗಂಟೆಯ ವೇಳೆ ಗಮನಕ್ಕೆ ಬಂದಿದೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯನ್ನು ಬದುಕಿಸುವ ಕೊನೆಯ ಪ್ರಯತ್ನ ಎಂಬಂತೆ ಎನ್ನುವ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ, ಬಾಲಕಿ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನೂ ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರಿಂದಾಗಿ ಪೊಲೀಸರು ಶಂಕಿತರನ್ನು ವಶಕ್ಕೆ ಪಡೆದು, ತನಿಖೆಯನ್ನು ಬಿರುಸುಗೊಳಿಸಿದ್ದಾರೆ.

See also  ಉತ್ತರಾಖಂಡ: ಹೆದ್ದಾರಿಯಲ್ಲೇ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ..! ಮನೆ ಮತ್ತು ಕಾರುಗಳು ಜಖಂ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget