ಕೊಡಗು

ಶಿಕ್ಷಕನಿಗೆ ಯಮರೂಪಿಯಾದ ಲಾರಿ..!,ಶಿಕ್ಷಕ ಸ್ಥಳದಲ್ಲೇ ದುರಂತ ಅಂತ್ಯ..!

ನ್ಯೂಸ್ ನಾಟೌಟ್ : ಬೈಕ್‌ ವೊಂದು ಸ್ಕಿಡ್‌ ಆಗಿ ಕೆಳಗೆ ಬಿದ್ದ ಶಿಕ್ಷಕನ ಮೇಲೆ ಲಾರಿ ಹರಿದು (Road Accident)ದುರಂತ ಅಂತ್ಯ ಕಂಡಿರುವ ಘಟನೆ ಉತ್ತರಕನ್ನಡದ ಕಾರವಾರದ ಹಬ್ಬುವಾಡದಲ್ಲಿ ನಡೆದಿದೆ. ಉಮೇಶ ಗುನಗಿ (50) ಉಸಿರು ಚೆಲ್ಲಿದ ಶಿಕ್ಷಕ.

ಶಿಕ್ಷಕ ಎಂದಿನಂತೆ ಉಮೇಶ ಅವರು ಕಾರವಾರದಿಂದ ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಚಾನಕ್ ಆಗಿ ಬೈಕ್‌ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಎದುರಿಗೆ ಬಂದ ಯಮರೂಪದಂತಿದ್ದ ಲಾರಿಯು ಶಿಕ್ಷಕ ಉಮೇಶ ಮೇಲೆ ಹರಿದಿದೆ. ಪರಿಣಾಮ ಗಂಭೀರ ಗಾಯಗೊಂಡ ಉಮೇಶ ಅವರು ಕೊನೆಯುಸಿರೆಳೆದಿದ್ದಾರೆ.

ರಸ್ತೆ ಅವ್ಯವಸ್ಥೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಅವೈಜ್ಞಾನಿಕ ರಸ್ತೆಯಿಂದ ಹಲವರ ಜೀವ ಕಸಿಯುತ್ತಿದೆ ಎಂದು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆಯನ್ನು ಮುಂದುವರಿಸಿದ್ದಾರೆ. ಇತ್ತ ಅಪಘಾತದಿಂದಾಗಿ ಕಿ.ಮೀ ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

https://www.youtube.com/watch?v=qGEtFpQw6KI

Related posts

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ,ಕೊಲೆ ಶಂಕೆ

ಕೊಡಗು:ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ,ಯುವತಿಯ ಬರ್ಬರ ಕೊಲೆ:ಯುವತಿ ಕೊಂದು ತಾನು ಆತ್ಮಹತ್ಯೆ?

ಕುಡಿಯುವ ನೀರು ಒದಗಿಸುವಂತೆ ಗ್ರಾಮಸ್ಥರ ಪ್ರತಿಭಟನೆ