ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ವಿವಿ ಮಟ್ಟದ ಮಹಿಳೆಯರ ಹಾಗೂ ಪುರುಷರ ಗುಡ್ಡಗಾಡು ಓಟ, ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರಿಂದ ಅಭಿನಂದನೆ

194

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಹಾಗೂ ಪುರುಷರ ಗುಡ್ಡಗಾಡು ಓಟ ಸ್ಪರ್ಧೆ ಮಂಗಳವಾರ (ಅ. 29) ನಡೆಯಿತು.

ಮುಂಜಾನೆ ಬೆಳಗಿನ ಜಾವ 6.30ಕ್ಕೆ ಎ.ಒ.ಎಲ್.ಇ(ರಿ.) ಸುಳ್ಯ ಇದರ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ ಸ್ಪರ್ಧೆಗೆ ಚಾಲನೆ ನೀಡಿದರು. ಈ ವೇಳೆ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ| ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ಕಾಲೇಜಿನ ಮೈದಾನದಿಂದ ಪ್ರಾರಂಭಗೊಂಡ ಸ್ಪರ್ಧೆ 10 ಕಿ.ಮೀ. ಕ್ರಮಿಸಿ ಪುನಃ ಆರಂಭಿಕ ಹಂತವನ್ನು ತಲುಪುವುದರೊಂದಿಗೆ ಸ್ಪರ್ಧೆ ಮುಕ್ತಾಯಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಚಿದಾನಂದ ಕೆ ವಿ ಅಧ್ಯಕ್ಷತೆ ವಹಿಸಿ ಸ್ಪರ್ಧಾ ವಿಜೇತರಿಗೆ ಅಭಿನಂದಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ, ಜೊತೆ ಕಾರ್ಯದರ್ಶಿಗಳಾದ ಹೇಮನಾಥ್ ಕೆ.ವಿ, ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕಾಲೇಜಿನ ಡೀನ್ ಡಾ| ನೀಲಾಂಬಿಕೈ ನಟರಾಜನ್, ಕ್ರೀಡಾ ಸಂಯೋಜಕರಾದ ಡಾ| ವರುಣ್ ಭಾಸ್ಕರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಮಿಥನ್ ಕೆ. ಉಪಸ್ಥಿತರಿದ್ದರು. ಬಳಿಕ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪುರು‍ಷರ ವಿಭಾಗದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬಳ್ಳಾರಿ ಮೆಡಿಕಲ್ ಕಾಲೇಜು ಮತ್ತು ಆಂಡ್ ರಿಸರ್ಚ್ ಸೆಂಟರ್, ಬಳ್ಳಾರಿ ಪ್ರಥಮ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಸುಳ್ಯ ದ್ವಿತೀಯ, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಮೂಡುಬಿದಿರೆ, ತೃತೀಯ ಸ್ಥಾನ ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಸಜ್ಜನಶ್ರೀ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಭಾಗಲಕೋಟೆ ಪ್ರಥಮ, ಕೆ.ವಿ.ಜಿ ಇನ್ಸ್ಟಿಟ್ಯೂಸ್ ಆಫ್ ಫಿಸಿಯೋತೆರಪಿ ಸುಳ್ಯ ದ್ವಿತೀಯ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ತೃತೀಯ ಸ್ಥಾನ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಡಾ| ವರುನ್ ಭಾಸ್ಕರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಾದ್ವಿ ಹರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾರ್ಥಿಗಳು, ದೈಹಿಕ ಶಿಕ್ಷಣ ನಿರ್ದೇಶಕರು, ವಿದ್ಯಾರ್ಥಿಗಳು ಉಪನ್ಯಾಸಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಆಯುರ್ವೇದ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget