ಐಪಿಎಲ್: ಚೆನ್ನೈ ಸೂಪರ್‌ ಕಿಂಗ್ಸ್ ಫೈನಲ್‌ಗೆ

4

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.  ಈ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ.

ಋತುರಾಜ್ ಗಾಯಕವಾಡ್ (70) ಹಾಗೂ ರಾಬಿನ್ ಉತ್ತಪ್ಪ (63) ಆಕರ್ಷಕ ಅರ್ಧಶತಕ ಸಾಧನೆಯ ಬಳಿಕ ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 18 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿ ಎನಿಸಿದರು.  ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್, ಪೃಥ್ವಿ ಶಾ (60), ನಾಯಕ ರಿಷಭ್ ಪಂತ್ (51*) ಹಾಗೂ ಹೆಟ್ಮೆಯರ್ (37) ಬಿರುಸಿನ ಆಟದ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 172 ರನ್ ಗಳ ಸವಾಲಿನ ಮೊತ್ತ ಪೇರಿಸಿತ್ತು. ಪೃಥ್ವಿ 27 ಹಾಗೂ ಪಂತ್ 35 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. 

ಆದರೆ ಚೆನ್ನೈ ತಂಡಕ್ಕೆ ಶತಕದ ಜೊತೆಯಾಟ ಕಟ್ಟಿದ ಗಾಯಕವಾಡ್ ಹಾಗೂ ಉತ್ತಪ್ಪ ಭದ್ರ ಅಡಿಪಾಯ ಹಾಕಿಕೊಟ್ಟರು. ಕೊನೆಯ ಹಂತದಲ್ಲಿ ತಮ್ಮ ನೈಜ ಆಟ ಪ್ರದರ್ಶಿಸಿದ ಧೋನಿ ಕೇವಲ ಆರು ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 18 ರನ್ ಗಳಿಸಿ ಔಟಾಗದೆ ಉಳಿದರು. ಈ ಮೂಲಕ ಚೆನ್ನೈ ತಂಡವು ಇನ್ನು ಎರಡು ಎಸೆತಗಳು ಬಾಕಿ ಉಳಿದಿರುವಂತೆಯೇ ಆರು ವಿಕೆಟ್ ನಷ್ಟಕ್ಕೆ ಗೆಲುವು ದಾಖಲಿಸಿತು. 

Related Articles

ಕ್ರೀಡೆ/ಸಿನಿಮಾ

ಮಂಗಳೂರು ಬೆಡಗಿ ಅನುಷ್ಕಾ ಶೆಟ್ಟಿಗೆ ಶೀಘ್ರದಲ್ಲೇ ಮದುವೆ?!43ನೇ ವಯಸ್ಸಿಗೆ ಹಸೆಮಣೆ ಏರಲು ಸಜ್ಜಾದ ಬಾಹುಬಲಿ ‘ದೇವಸೇನ’

ನ್ಯೂಸ್‌ ನಾಟೌಟ್‌: ಮಂಗಳೂರು ಬೆಡಗಿ ಬಾಹುಬಲಿ’ ಚಿತ್ರದ ಮೂಲಕ ದೇಶಾದ್ಯಂತ ಗುರುತಿಸಿಕೊಂಡ ಅನುಷ್ಕಾ ಶೆಟ್ಟಿಗೆ ಇದೀಗ...

@2025 – News Not Out. All Rights Reserved. Designed and Developed by

Whirl Designs Logo