ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ ‘ಸುಕೃತಾ 2024’ ಗುರುವಾರ (ಡಿ.5)ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಶುಪಾಲ ಡಾ. ಲೀಲಾಧರ್ ಡಿ.ವಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಭಿವದ್ಧಿ ಅಧಿಕಾರಿ ಹಾಗೂ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ. ಹರ್ಷಿತಾ ಎಂ.ಹಾಗೂ ಸಾಹಿತ್ಯಿಕ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮಿ.ವಿನಯ್ ಹೆಚ್.ವಿ. ಸ್ವಾಗತಿಸಿ, ನೀಲಾ ಮಹಂತಪ್ಪ ವಂದಿಸಿದರು. ಶ್ರಾವಣಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಮೂಲ್ಯ ಸಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳು, ಕಿರಿಯ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸಾಹಿತ್ಯಿಕ ಸ್ಪರ್ಧೆಯಲ್ಲಿ ಭಾಗವಹಿಸಿದರು.