ಕ್ರೈಂದಕ್ಷಿಣ ಕನ್ನಡದೇಶ-ವಿದೇಶಮಂಗಳೂರುವೈರಲ್ ನ್ಯೂಸ್

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವ್ಯಕ್ತಿಗೆ 1.60 ಕೋಟಿ ರೂ. ವಂಚನೆ..! ವಿದೇಶದಲ್ಲಿ ಕಲಿಯುತ್ತಿರುವ ನಿಮ್ಮ ಮಗ ಮತ್ತು ಮಗಳನ್ನು ಬಂಧಿಸುವುದಾಗಿ ಬೆದರಿಕೆ..!

ನ್ಯೂಸ್ ನಾಟೌಟ್: ಮಂಗಳೂರು: ಪೊಲೀಸ್ ಅಧಿಕಾರಿಯ ವೇಷದಲ್ಲಿ ಹಿರಿಯ ನಾಗರಿಕರೊಬ್ಬರಿಗೆ 1.60 ಕೋಟಿ ರೂ. ವಂಚಿಸಿದ ಘಟನೆ ಮಂಗಳುರಿನಲ್ಲಿ ಬೆಳಕಿಗೆ ಬಂದಿದೆ. ಆನ್‌ಲೈನ್ ಮೂಲಕ ಹಣ ಕಳೆದುಕೊಂಡಿರುವ ವ್ಯಕ್ತಿ ಇದೀಗ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಹಣ ಕಳೆದುಕೊಂಡಿರುವ ವ್ಯಕ್ತಿಗೆ ಇತ್ತೀಚೆಗೆ ಪೊಲೀಸ್ ಅಧಿಕಾರಿ ಎಂದು ಕರೆ ಮಾಡಿ ನೀವು ಮುಂಬೈನಿಂದ ಥಾಯ್ಲೆಂಡ್‌ಗೆ ಕಳುಹಿಸಿದ ಪಾರ್ಸೆಲ್‌ನಲ್ಲಿ ನಿಷೇಧಿತ ವಸ್ತು ಇದೆ ಎಂಬ ಕಾರಣ ನೀಡಿ ಥಾಯ್ಲೆಂಡ್‌ನ ಕಸ್ಟಮ್ಸ್‌ನ ಅಧಿಕಾರಿಗಳು ತಡೆ ಹಿಡಿದಿದ್ದಾರೆ.

ಈ ಪ್ರಕರಣವನ್ನು ಮುಂಬೈನ ಸೈಬರ್ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾನೆ ಎನ್ನಲಾಗಿದೆ. ಈ ಪಾರ್ಸೆಲ್ ವಿವಾದವನ್ನು ಬಗೆಹರಿಸಲು ತಾನು ಹೇಳಿದಷ್ಟು ಹಣವನ್ನು ಠೇವಣಿಯಾಗಿ ಇಡಬೇಕು. ಈ ಹಣವನ್ನು ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ವಾಪಸ್ ನೀಡಲಾಗುವುದು. ಹಣ ಪಾವತಿಸದಿದ್ದರೆ ವಿದೇಶದಲ್ಲಿ ಕಲಿಯುತ್ತಿರುವ ನಿಮ್ಮ ಮಗ ಮತ್ತು ಮಗಳನ್ನು ಬಂಧಿಸುವುದಾಗಿ ಆತ ತಮಗೆ ಬೆದರಿಕೆ ಹಾಕಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಂಚನೆಗೊಳಗಾದ ವ್ಯಕ್ತಿ ತಿಳಿಸಿದ್ದಾರೆ. ಮುಂಬೈನ ಪೊಲೀಸ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ ಸೂಚನೆಯಂತೆ ವಿವಿಧ ಖಾತೆಗಳಿಗೆ 1.60 ಕೋಟಿ ರೂ. ಠೇವಣಿ ಇಟ್ಟು ಇದೀಗ ವಂಚನೆಗೊಳಗಾಗಿದ್ದಾರೆ. ವಂಚನೆ ಅರಿವಾಗುತ್ತಲೇ ಹಣ ಕಳೆದುಕೊಂಡಿರುವ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Related posts

ಬೇರೊಬ್ಬನ ಜೊತೆ ರೀಲ್ಸ್ ಮಾಡಿದ್ದ ಆಕೆಗೆ ಕಾದಿತ್ತು ಶಾಕ್! ಊರಿಗೆ ಬಂದವಳನ್ನು ಪೆಟ್ರೋಲ್ ಹಾಕಿ ಸುಟ್ಟಿದ್ದ ಪಾಗಲ್ ಪ್ರೇಮಿ!

ಸಂಚಾರಿ ಪೊಲೀಸರ ಹೆಸರಿನಲ್ಲಿ ದಂಡ ಕಟ್ಟಲು ಕರೆ ಬಂದರೆ ಎಚ್ಚರ..! ಈ ಬಗ್ಗೆ ಪೊಲೀಸ್‌ ಆಯುಕ್ತರು ಹೇಳಿದ್ದೇನು..?

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರ ಸೆರೆ