Uncategorized

ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ; ಆಟವಾಡುತ್ತಿದ್ದ ಬಾಲಕ ದುರಂತ ಅಂತ್ಯ

ನ್ಯೂಸ್ ನಾಟೌಟ್: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ಘಟನೆಯ ವಿವರ:

ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.ಬಾಲಕ ಮಹೇಶ್​ ಮೂಲತಃ ಯಾದಗಿರಿ ಜಿಲ್ಲೆಯ ರಾಮಸಮುದ್ರ ಗ್ರಾಮದವನು. ಕೂಲಿ ಕಾರ್ಮಿಕ ದಂಪತಿ ಮಲ್ಲಪ್ಪ, ಸರಸ್ವತಿಯವರ 2ನೇ ಪುತ್ರ.ಆಸ್ಪತ್ರೆ ಎದುರು ಮಹೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಬಾಲಕ ಮಹೇಶ್​ ಚೋಳನಾಯಕನಹಳ್ಳ ಅಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ. ಕಳೆದ ಎಂಟು ವರ್ಷಗಳಿಂದ ಮೃತರ ಪೊಷಕರು ಕೂಲಿ ಕೆಲಸ ಮಾಡುತ್ತಿದ್ದರು. ದೇವರಾಜ್ ಎಂಬುವರಿಗೆ ಸೇರಿದ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ಗೋಡೌನ್​ನಲ್ಲಿ ಲಿಯಾಕತ್ ಎಂಬುವನು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ. ಈ ವೇಳೆ ಮನೆಯ ಪಕ್ಕದಲ್ಲಿ ಬಾಲಕ ಆಟವಾಡುತ್ತಿದ್ದಾಗ ಸಿಲಿಂಡರ್​ ಸ್ಫೋಟಗೊಂಡಿದೆ. ಸಿಲಿಂಡರ್ ಬ್ಲಾಸ್ಟ್ ರಭಸಕ್ಕೆ ಬಾಲಕನ ದೇಹ ಛಿದ್ರವಾಗಿದೆ ಎನ್ನಲಾಗುತ್ತಿದೆ. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಘಟನೆಯ ಬೆನ್ನಲ್ಲೇ ಲಿಯಾಕತ್​ ಎಸ್ಕೇಪ್ ಆಗಿದ್ದು, ಆತನ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಮಳೆಯ ನೀರಿನಲ್ಲಿ ತೇಲಿ ಬಂತು ₹500 ನೋಟುಗಳ ರಾಶಿ..! ಜೀವ ಬಿಟ್ಟು ನೋಟು ಹೆಕ್ಕಿದ ಜನ, ಅಷ್ಟಕ್ಕೂ ಘಟನೆ ನಡೆದಿದ್ದು ಎಲ್ಲಿ..?

ಪ್ರವೀಣ್‌ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ

ಕರೋನಾ ಹೆಚ್ಚಾದರೆ ಶಾಲೆಗೆ ಬೀಗ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ