Latestಉಡುಪಿದಕ್ಷಿಣ ಕನ್ನಡರಾಜ್ಯವೈರಲ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಶಾಲೆಗಳಿಗೆ ರಜೆ..! ತುರ್ತು ಸಂದರ್ಭದಲ್ಲಿ ಸಹಾಯವಾಣಿ ಬಳಸುವಂತೆ ಮನವಿ

587

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಇಂದು(ಮೇ.30) ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಭಯ ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ಅಂಗನವಾಡಿ ಕೇಂದ್ರಗಳು ಮತ್ತು 1 ರಿಂದ 10 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯವರು 0824-2442590 ಹಾಗೂ ಉಡುಪಿ ಜಿಲ್ಲೆಯವರು 0820-2574802 ಸಂಖ್ಯೆಗೆ ಯಾವುದೇ ಸಮಯದಲ್ಲಿ ಬೇಕಿದ್ದರೂ ಕರೆ ಮಾಡಬಹುದು ಎಂದು ಜಿಲ್ಲಾಡಳಿತಗಳು ತಿಳಿಸಿವೆ.

ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ಪೋಷಕರು ಮುನ್ನೆಚ್ಚರಿಕೆ ವಹಿಸಬೇಕು ಎಂದಿರುವ ಜಿಲ್ಲಾಡಳಿತವು, ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಂಭಾವ್ಯ ಅವಘಡಗಳ ಸಂದರ್ಭದಲ್ಲಿ ಕಾರ್ಯನಿರ್ವಹಣೆಗಾಗಿ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು. ತಹಶೀಲ್ದಾರ್ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.

See also  ಲಂಡನ್ ಮೂಲದ ವಿಶ್ವ ಕೌಶಲ್ಯ ಮಂಡಳಿಯಿಂದ ಮಾನ್ಯತೆ, ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸಂಭ್ರಮದ ಕ್ಷಣ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget