ಕರಾವಳಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸುವ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

183

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ. ಅಲ್ಲದೆ, 11 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಈ ಹಿನ್ನೆಲೆಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದ ಹಲವು ಕಡೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ. ಜತೆಗೆ ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿ ವೇಗವು ಗಂಟೆ 40-45 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಅಂದಾಜಿಸಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

See also  ಮಂಗಳೂರು: 9ನೇ ತರಗತಿ ಪಾಸಾಗಿದ್ದಕ್ಕೆ ಬಾಲಕಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಟ್ರೀಟ್ ಕೇಳಿದ ಆಟೋ ಚಾಲಕ..!, ಇಕ್ಬಾಲ್ ನ ಸತತ ಕಿರುಕುಳ ತಾಳಲಾರದೆ ಪೋಷಕರಿಗೆ ದೊರು ಕೊಟ್ಟ ಬಾಲಕಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget