ಕರಾವಳಿ

ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್​ಗೆ ಕಾರು ಡಿಕ್ಕಿ..!,ಪೂಜೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಅವಘಡ

192

ನ್ಯೂಸ್ ನಾಟೌಟ್ : ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ (BJP MLA Rajesh Naik) ಅವರಿಗೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿ ಸ್ಥಳೀಯರ ನೆರವಿನಿಂದ ಸಿಕ್ಕಿಬಿದ್ದಿರುವ ಘಟನೆ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದ್ದು, ಶಾಸಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಶಾಸಕರು (ಜನವರಿ 14) ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆಂದು ತೆರಳಿದ್ದರು.ಪೂಜೆ ಮುಗಿಸಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್​ ಅವರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್​ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ರಾಜೇಶ್ ನಾಯ್ಕ್​ ಕಾರಿಗೆ ಡಿಕ್ಕಿ ಹೊಡೆದ ಬಳಿಕ ಎಸ್ಕೇಪ್ ಆಗುತ್ತಿದ್ದ ಸ್ವಿಫ್ಟ್ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಅಡ್ಡಗಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಜ್ಪೆ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ರಾಜೇಶ್ ನಾಯ್ಕ್​ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ.

See also  ಕಾರ್ಕಳ: ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ, ಪ್ರಕರಣಕ್ಕೆ ಬೆಂಗಳೂರು ಮತ್ತು ತಿರುಪತಿ ಮೂಲದ ಮತ್ತಿಬ್ಬರ ಲಿಂಕ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget