Latestಕರಾವಳಿಕ್ರೈಂದಕ್ಷಿಣ ಕನ್ನಡರಾಜ್ಯವೈರಲ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಮುಸ್ಲಿಂ ಮುಖಂಡರು..! ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆ ಹಿಂಪಡೆಯುವಂತೆ ಒತ್ತಾಯ..!

442

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ.
ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹೀಂ ಕೊಲೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಸಚಿವರು ವಾಪಾಸ್ ಪಡೆಯಬೇಕು ಎಂದು ಒತ್ತಾಯ ಮಾಡಿದ್ದಾರೆ.

ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.
ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಬಳಿಕ ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆಯನ್ನು ನೀಡಿದ್ದಾರೆ.

ಚೀಫ್ ಹ್ಯಾಪಿನೆಸ್ ಆಫೀಸರ್ ಆಗಿ ನೇಮಕಗೊಂಡ ಶ್ವಾನ..! ಹೈದರಾಬಾದ್ ನ ಕಂಪನಿಯೊಂದರ ವಿಚಿತ್ರ ನಿರ್ಧಾರ..!

ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳಿಂದ ಡಿಮ್ಯಾಂಡ್..! ಈ ಹಿಂದೆಯೂ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಸ್ಥಳಾಂತರವಾಗಿದ್ದ ಆರೋಪಿಗಳು..!

See also  ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವೈದ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget