ಕರಾವಳಿಪುತ್ತೂರು

ಪುತ್ತೂರು:80ಕ್ಕೂ ಹೆಚ್ಚು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ‘ಇತ್ತೆ ಬರ್ಪೆ ಅಬೂಬಕ್ಕರ್’ ಬಂಧನ,ಆರೋಪಿಯನ್ನು ‘ಮುರನಿ’ ಬಂಧಿಸಿ ಚಳಿ ಬಿಡಿಸಿದ ಪೊಲೀಸರು..!

212

ನ್ಯೂಸ್ ನಾಟೌಟ್ :ವಾರದ ಹಿಂದೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದ್ದ 2 ಲಕ್ಷ ನಗದು ಮತ್ತು ಸ್ಕೂಟಿ ಕಳವು ಪ್ರಕರಣ ಸೇರಿದಂತೆ ಸುಮಾರು ೮೦ಕ್ಕೂ ಅಧಿಕ ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ ಇತ್ತೆ ಬರ್ಪೆ ಅಬೂಬಕ್ಕರ್ ಬಂಧಿತ ಆರೋಪಿಯೆಂದು ತಿಳಿದು ಬಂದಿದೆ. ಈತನನ್ನು ಸೋಮವಾರ ರಾತ್ರಿ ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವಾರದ ಹಿಂದೆ ಕೆದಿಲದ ರಮ್ಲಾಕುಂಞಿ ಎಂಬುವರ ಮನೆಯಿಂದ ₹ 2 ಲಕ್ಷ, ಇಸುಬು ಬ್ಯಾರಿ ಅವರ ಮನೆಯ ಅಂಗಳದಿಂದ ಸ್ಕೂಟಿ ಕಳವಾಗಿತ್ತು. ಸ್ಕೂಟಿ ಕಳವು ಮಾಡಿದ್ದ ಆರೋಪಿ, ರಮ್ಲಾಕುಂಞಿ ಮನೆಯಿಂದ ನಗದು ಹಣ ಕಳವು ಮಾಡಿ ಸ್ಕೂಟಿಯನ್ನು ಕೆದಿಲ ವ್ಯಾಪ್ತಿಯ ಬೇರೊಂದು ಕಡೆ ನಿಲ್ಲಿಸಿ ಪರಾರಿಯಾಗಿದ್ದ. ಸೋಮವಾರ ರಾತ್ರಿ ಸ್ಕೂಟಿ ತೆಗೆದುಕೊಂಡು ಹೋಗಲು ಕೆದಿಲಕ್ಕೆ ಬಂದಿದ್ದ ಇತ್ತೆ ಬರ್ಪೆ ಅಬೂಬಕ್ಕರ್‌ನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ಡಿ.19ರವರಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ವಿರುದ್ಧ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಸುರತ್ಕಲ್, ಕಾರ್ಕಳ, ಉಡುಪಿ, ಚಿಕ್ಕಮಗಳೂರಿನಲ್ಲೂ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

See also  ಪೋಷಕರೆ ಎಚ್ಚರ! ಮಂಗಳೂರಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ !
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget