ಕರಾವಳಿಕೊಡಗು

ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಿಗೆ’ಯೆಲ್ಲೋ ಅಲರ್ಟ್‌’ ಘೋಷಣೆ, 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ

ನ್ಯೂಸ್ ನಾಟೌಟ್: ರಾಜ್ಯದ ಹಲವು ಕಡೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ ಸೇರಿದಂತೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ಮಾಹಿತಿ ಹೊರಡಿಸಿರುವ ಹವಾಮಾನ ಇಲಾಖೆ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಶನಿವಾರವೂ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಭಾನುವಾರದಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ನಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

Related posts

ಅಂಗಡಿಯಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್ ,ಗಂಭೀರ ಗಾಯಗೊಂಡಿದ್ದ ವ್ಯಕ್ತಿ ದುರಂತ ಅಂತ್ಯ

ಕಾರ್ಕಳ:ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್‌:ವಾಹನ ಜಖಂ, 13 ಮಂದಿಗೆ ಗಾಯ

ಕೇವಲ 50 ರೂ.ಗೆ  1 ಕೆ.ಜಿ ಬಂಗುಡೆ, ಮುಗಿಬಿದ್ದ ಜನ, ನಿಮಗೂ ಬೇಕಾ?