ಕರಾವಳಿರಾಜಕೀಯ

ಬಿ.ಕೆ.ಹರಿಪ್ರಸಾದ್‌ ಅವರನ್ನು ಕೂಡಲೇ ಬಂಧಿಸಬೇಕು;ನಾನು ಕರಸೇವಕ-ರಾಮಭಕ್ತ, ಸರ್ಕಾರಕ್ಕೆ ಶಕ್ತಿಯಿದ್ದರೆ ನನ್ನನ್ನೂ ಬಂಧಿಸಲಿ-ದ.ಕ. ಸಂಸದ ನಳಿನ್ ಕುಮಾರ್ ಕಟೀಲ್

ನ್ಯೂಸ್ ನಾಟೌಟ್‌: ‘ರಾಜ್ಯದಲ್ಲಿ ಗೋಧ್ರಾ ಮಾದರಿಯ ಹತ್ಯಾಕಾಂಡಕ್ಕೆ ಸಂಚು ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ ಬಿ.ಕೆ.ಹರಿಪ್ರಸಾದ್‌ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್ ಒತ್ತಾಯಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಬಿ.ಕೆ.ಹರಿಪ್ರಸಾದ್ ಅವರ ಬಳಿ ಈ ಕುರಿತ ಮಾಹಿತಿ ಇದ್ದರೆ ಗೃಹ ಇಲಾಖೆಗೆ ನೀಡಬೇಕು ಇಲ್ಲದಿದ್ದರೆ ತಕ್ಷಣ ಅವರನ್ನು ಬಂಧಿಸಬೇಕು’ ಎಂದು ಹೇಳಿದ್ದಾರೆ.

‘ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಗೃಹಸಚಿವ ಜಿ.ಪರಮೇಶ್ವರ ಅವರು ಇದು ಚರ್ಚೆಗೆ ಬಂದಿಲ್ಲ ಎಂದಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.ಆದರೆ ಗೋದ್ರಾ ಘಟನೆಯ ಹಿಂದೆ ಇದ್ದದ್ದು ಕಾಂಗ್ರೆಸ್. ಗುಜರಾತ್‌ನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಬೀಳಿಸಬೇಕೆಂಬ ಕುತಂತ್ರವನ್ನು ಆಗ ಕಾಂಗ್ರೆಸ್ ನಡೆಸಿತ್ತು. ಈಗ ಮತ್ತೆ ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್‌ ಈ ರೀತಿ ಹೇಳಿಕೆ ನೀಡಿದ್ದಾರಂದ್ರೆ ಕಾಂಗ್ರೆಸ್ ಈ ಷಡ್ಯಂತ್ರವನ್ನು ಮಾಡಿದೆ ಎಂದರ್ಥ’ ಎಂದು ಕಿಡಿ ಕಾರಿದರು.

’ಸಿದ್ದರಾಮಯ್ಯ ಅವರೇ ನನಗೆ ರಾಮ’ ಎಂಬ ಕಾಂಗ್ರೆಸ್‌ ಮುಖಂಡ ಎಚ್‌.ಆಂಜನೇಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಳಿನ್‌, ‘ರಾಮನಿಗೆ ರಾಮನೇ ಹೋಲಿಕೆಯೇ ಹೊರತು, ಇನ್ನೊಂದು ಹೋಲಿಕೆಯಿಲ್ಲ. ಹೆಸರಿಟ್ಟುಕೊಂಡವರೆಲ್ಲ ರಾಮ ಆಗಲು ಸಾಧ್ಯವಿಲ್ಲ. ರಾಮ ಎಂಬುದು ಭಾವನಾತ್ಮಕ ನಂಬಿಕೆಗಳ ಸಂಕೇತ. ಮರ್ಯಾದಾ ಪುರುಷ ರಾಮನನ್ನು ಆದರ್ಶಪುರುಷನಾಗಿ ಸ್ವೀಕರಿಸಲಾಗಿದೆ. ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇದೆ. ಆದರೆ, ರಾವಣನ ಗುಣವಿದೆ’ ಎಂದರು.

‘ರಾಜ್ಯದಲ್ಲಿ ರಾಮ ಜನ್ಮಭೂಮಿಯ ಹೋರಾಟದ ಕರಸೇವಕರನ್ನು ಬಂಧಿಸಲಾಗುತ್ತಿದೆ. ನಾನೂ ಕರಸೇವಕ, ರಾಮಭಕ್ತ. ಸರ್ಕಾರಕ್ಕೆ ಶಕ್ತಿಯಿದ್ದರೆ ನನ್ನನ್ನೂ ಬಂಧಿಸಲಿ. ಎಲ್ಲಾ ಕರಸೇವಕರನ್ನು ಬಂಧಿಸಲಿ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದರು.

Related posts

ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ..! ಮೇಳದ ತಿರುಗಾಟಕ್ಕೆ ತೆರಳಿದ್ದ ವೇಳೆ ಹೃದಯಾಘಾತ

ಸಂಪಾಜೆ: ಮಂಜು ಶ್ರೀ ಕಪ್ 2022: ಮಾಡಾವು ಚಾಂಪಿಯನ್ , ಕಲ್ಲುಗುಂಡಿ ರನ್ನರ್ ಅಪ್

ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕೆಲಸಗಾರ ಆತ್ಮಹತ್ಯೆ