ಕರಾವಳಿ

ಕಡಬ: ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸಮಾಜಸೇವಕ ಉದಯ ಕುಮಾರ್‌ ಇನ್ನಿಲ್ಲ..!ನೂತನ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಕೊನೆಯುಸಿರು

ನ್ಯೂಸ್ ನಾಟೌಟ್ :ಹೊಸ ಮನೆ ಕಟ್ಟಬೇಕು..ಎಂಬ ಕನಸಲ್ಲಿದ್ದ ಯುವಕನೋರ್ವ ನೂತನ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ದುರಂತ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಬಾರ್ಕುಲಿಯಿಂದ ವರದಿಯಾಗಿದೆ.ಉದಯ ಕುಮಾರ್‌ (27) ಉಸಿರು ಕೊನೆಯುಸಿರೆಳೆದ ಯುವಕ. ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾರದ ಲೋಕಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.

ನ. 12ರಂದು ಕಾಮಗಾರಿ ನಡೆಯುತ್ತಿದ್ದ ತನ್ನ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ತತ್‌ಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದರು. ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಆಲಂಕಾರು ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಸುನಂದ ಬಾರ್ಕುಲಿ ಸೇರಿದಂತೆ, ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಸುಳ್ಯ:ರಸ್ತೆ ಬದಿಯಲ್ಲಿ ಹೋಗುತ್ತಿದ್ದಾಗ ಯಮರೂಪದಲ್ಲಿ ಬಂದ ಕಾರು..!, ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ದುರಂತ ಅಂತ್ಯ

ಬೆಳ್ಳಾರೆ: ನಡು ರಸ್ತೆಯಲ್ಲಿ ಯುವಕನ ನೆತ್ತರು ಹರಿಸಿದ ದುಷ್ಕರ್ಮಿಗಳ ಮೇಲೆ ಎಫ್ಐಆರ್..! ಭೀಕರ ಹಲ್ಲೆಗೊಳಗಾದವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ 

ಮಂಗಳೂರು: ಕಟೀಲು ಶ್ರೀದುರ್ಗಾಪರಮೇಶ್ವರಿಯ ದರ್ಶನ ಪಡೆದ ನಟ ಶ್ರೀಮುರಳಿ, ಕರಾವಳಿಯ ನಟರು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ ಎಂದ ನಟ