ಕರಾವಳಿಕ್ರೈಂದಕ್ಷಿಣ ಕನ್ನಡವೈರಲ್ ನ್ಯೂಸ್

ದಕ್ಷಿಣ ಕನ್ನಡ: ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ಹೋದವ ಮತ್ತೆ ಬರಲೇ ಇಲ್ಲ..! ಬಾಗಿಲು ಒಡೆದವರಿಗೆ ಕಾದಿತ್ತು ಶಾಕ್..!

234
Pc cr: Vartha bharati

ನ್ಯೂಸ್‌ ನಾಟೌಟ್‌: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ(ಜು.28) ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.

ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಶಾರಿಕ್ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆ ಆಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ.

Click

https://newsnotout.com/2024/07/darshan-food-and-health-issue-kannada-news-highcourt-e/
See also  ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಂಡ ರಿಷಬ್‌ ಶೆಟ್ಟಿ..! ಕಾಂತಾರದ ನಟನಿಗೆ ಫುಲ್ ಡಿಮ್ಯಾಂಡ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget