Latestಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಗೆ ಸಿದ್ಧತೆ : ಈ ಬಾರಿ ಡ್ರೋನ್‌ ಗೆ ನಿರ್ಬಂಧ ,ಶುಚಿತ್ವಕ್ಕೆ ವಿಶೇಷ ಆದ್ಯತೆ

1.2k

ನ್ಯೂಸ್‌ ನಾಟೌಟ್: ಹತ್ತೂರ ಒಡೆಯ ಪುತ್ತೂರ ಮುತ್ತು ಮಹಾಲಿಂಗೇಶ್ವರ ದೇಗುಲದ ಬ್ರಹ್ಮರಥೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ. ಈ ಬಾರಿ ಕೆಲವೊಂದು ಮಹತ್ವದ ನಿರ್ಧಾರವನ್ನು ದೇಗುಲದ ವ್ಯವಸ್ಥಾಪನ ಸಮಿತಿ ಮಾಡಿದ್ದು,ಗರುಡಾಗಮನಕ್ಕೆ ಅಡ್ಡಿಯಾಗುವುದೂ ಸೇರಿ ಕೆಲವೊಂದು ಕಾರಣಗಳಿಗಾಗಿ ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋನ್‌ಗೆ ಅವಕಾಶ ಇಲ್ಲ ಎಂದು ಹೇಳಿದೆ.

ದೇಗುಲದ ವಠಾರದ ಶುಚಿತ್ವಕ್ಕೆ ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದು ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ಹೇಳಿದ್ದಾರೆ.ಜಾತ್ರೆ ಹಿನ್ನೆಲೆಯಲ್ಲಿ ದೇಗುಲದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾ ಅಧಿಕಾರಿಗಳ ಸಭೆ ಯಲ್ಲಿ ಅವರು ಮಾತನಾಡಿ ಈ ಮಾಹಿತಿಯನ್ನು ಹಂಚಿಕೊಂಡರು. ಜಾತ್ರೆಯ ವೇಳೆ ಬ್ರಹ್ಮರಥ ಸೇವೆ ಹಿಂದಿನ ವರ್ಷ 68ಕ್ಕೆ ತಲುಪಿತ್ತು. ಈ ವರ್ಷ ಈಗಾಗಲೇ 105 ಮಂದಿ ಹೆಸರು ನೋಂದಾಯಿಸಿದ್ದಾರೆ. ಇದು ಇನ್ನೂ ಹೆಚ್ಚಾಗಲಿದೆ ಎಂದರು.

ಜಾತ್ರೆ ಅವಧಿಯಲ್ಲಿ ಊಟದ ವ್ಯವಸ್ಥೆ ಕೆರೆ ಪಕ್ಕದ ಜಾಗದಲ್ಲಿ ಮಾಡಲಾಗುತ್ತಿದ್ದು ಬೃಹತ್‌ ಚಪ್ಪರ ನಿರ್ಮಾಣ ಆಗಲಿದೆ. ಎಲ್ಲ ರೀತಿಯ ಮುಂಜಾಗ್ರತ ಕ್ರಮವಾಗಿ ಹತ್ತಾರು ಸಿಸಿ ಕೆಮರಾ ಅಳವಡಿಸಲಾಗುವುದು ಎಂದರು.

ಈ ವೇಳೆ ಶಾಸಕ ಅಶೋಕ್‌ ರೈ ಮಾತನಾಡಿ, ಕೆರೆ ಆಸುಪಾಸಿನ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ನೀಡುವುದೇ ಬೇಡ. ಆ ಜಾಗ ಹಾಗೆಯೇ ಇರಲಿ ಎಂದಾಗ ಟ್ರಾಫಿಕ್‌ ಪಿ.ಎಸ್‌.ಐ. ಉದಯರವಿ, ಕೊಂಬೆಟ್ಟು, ಎಪಿಎಂಸಿ, ತೆಂಕಿಲ ಹಾಗೂ ಕಿಲ್ಲೆ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.ಉಳಿದಂತೆ ಎ. ೧೬ ಮತ್ತು ೧೭ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಹಾಗೂ ರಾತ್ರಿ 10 ಗಂಟೆಯವರೆಗೆ ಬಸ್‌ ವ್ಯವಸ್ಥೆ ಒದಗಿಸುವ ಬಗ್ಗೆ ತೀರ್ಮಾನಿಸಲಾಯಿತು.

 

 

 

View this post on Instagram

 

A post shared by News not out (@newsnotout)

See also  ಮದುವೆ ಪಾರ್ಟಿಯಲ್ಲಿ ಯುವತಿ ಜೊತೆ ಶಾಸಕನ ಅಶ್ಲೀಲ ಕೃತ್ಯ ವೈರಲ್..! ವಿಡಿಯೋ ಬಗ್ಗೆ ಶಾಸಕ ಹೇಳಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget