ನ್ಯೂಸ್ ನಾಟೌಟ್:ಯುವಕನೋರ್ವ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ.ಯುವಕನನ್ನು ಸಕಲೇಶಪುರದ ಮದನ್ (30) ಎಂದು ಗುರುತಿಸಲಾಗಿದೆ.
ಈತ ಕಡಬ-ಪಂಜ ರಸ್ತೆಯಲ್ಲಿ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪಕ್ಕೆ ಆಲ್ಟೋ ಕಾರಲ್ಲಿ ಬಂದಿದ್ದ. ಅಲ್ಲೇ ಕಾರನ್ನು ನಿಲ್ಲಿಸಿ ವಿಷ ಸೇವಿಸಿದ್ದು, ಆ ಬಳಿಕ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದ ಎನ್ನಲಾಗಿದೆ. ಆತ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು 112 ಪೊಲೀಸ್ ವಾಹನಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಅಸ್ವಸ್ಥಗೊಂಡಿದ್ದ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು, ಬಳಿಕ ಪುತ್ತೂರಿಗೆ ಕಳುಹಿಸಿಕೊಟ್ಟಿದ್ದಾರೆ.