ಕರಾವಳಿದಕ್ಷಿಣ ಕನ್ನಡಮಂಗಳೂರು

ಇಂದಿನಿಂದ(ಎ.3) 5 ದಿನ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

230

ನ್ಯೂಸ್ ನಾಟೌಟ್: ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

See also  ನಿಂತಿದ್ದ ಟಿಪ್ಪರ್‌ಗೆ ಫಾರ್ಚೂನರ್ ಕಾರು ಹಿಂಬದಿಯಿಂದ ಡಿಕ್ಕಿ;ಕಾರು ಚಾಲಕ ಸ್ಥಳದಲ್ಲೇ ಮೃತ್ಯು,ಮತ್ತೋರ್ವ ಗಂಭೀರ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget