ನ್ಯೂಸ್ ನಾಟೌಟ್: ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಕರಾವಳಿಗೆ ಸಂಬಂಧಿಸಿ ಜೂ.28 ಮತ್ತು 29ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಭಸವಾದ ಗಾಳಿ ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಶುಕ್ರವಾರ ಬೆಳಗ್ಗಿನ ವರೆಗಿನ 24 ಗಂಟೆಯಲ್ಲಿ ದ.ಕ. ಜಿಲ್ಲೆಯಲ್ಲಿ 5 ಮನೆಗೆ ಭಾಗಶಃ ಹಾನಿ ಉಂಟಾಗಿದ್ದು 101 ವಿದ್ಯುತ್ ಕಂಬ ಮತ್ತು ಒಂದು ಟ್ರಾನ್ಸ್ ಫಾರ್ಮರ್ ಗೆ ಹಾನಿಯಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆ ಸುರಿದಿದೆ. ಉಡುಪಿ ಜಿಲ್ಲಾದ್ಯಂತ ಶುಕ್ರವಾರ ಆರೆಂಜ್ ಅಲರ್ಟ್ ಘೋಷಣೆ ಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿದಿಲ್ಲ. ಉಡುಪಿ ನಗರ ಸಹಿತ ಸುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.
ಬೈಂದೂರು, ಕುಂದಾಪುರ ಭಾಗದಲ್ಲಿ ಹೆಚ್ಚು ಮಳೆ ಇರಲಿಲ್ಲ. ಕಾರ್ಕಳ, ಕಾಪು, ಬ್ರಹ್ಮಾವರ, ಹೆಬ್ರಿ ಮೊದಲಾದ ಭಾಗದಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಬಿಟ್ಟು ಬಿಟ್ಟು ಮಳೆಯಾಗಿದ್ದು ಮೋಡಕವಿದ ವಾತಾವರಣ ಮುಂದುವರಿದಿತ್ತು.