ಕರಾವಳಿ

ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

247

ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿ ಮೇಲೆ ತೀವ್ರ ಹಲ್ಲೆ ಮಾಡಿದ್ದು, ಆಂತರಿಕ ಗಾಯಗಳಿಂದಾಗಿ ಆತ ಮೃತಪಟ್ಟಿದ್ದಾನೆ. ಹೀಗಾಗಿ ಶಿಕ್ಷಕನನ್ನು ಅಮಾನತುಗೊಳಿಸಿ, ಪ್ರಕರಣ ದಾಖಲಿಸಲಾಗಿದೆ.

ಪರೀಕ್ಷೆಯಲ್ಲಿ ತಪ್ಪು ಮಾಡಿದ್ದ ಎಂಬ ಕಾರಣಕ್ಕೆ ಸೆಪ್ಟೆಂಬರ್ 13 ರಂದು 10 ನೇ ತರಗತಿಯ ವಿದ್ಯಾರ್ಥಿ ನಿಖಿತ್‌ ಕುಮಾರ್‌ ಮೇಲೆ ಶಿಕ್ಷಕ ತೀವ್ರವಾಗಿ ಹಲ್ಲೆ ಮಾಡಿದ್ದರು. ಸೋಮವಾರ ಚಿಕಿತ್ಸೆಗಾಗಿ ಇಟಾವಾದ ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸ್ಥಳಾಂತರಿಸುವಾಗ ವಿದ್ಯಾರ್ಥಿ ಆಂಬ್ಯುಲೆನ್ಸ್‌ನಲ್ಲಿ ಮೃತಪಟ್ಟಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದ್ದು ಸದ್ಯ ತಲೆಮರೆಸಿಕೊಂಡಿದ್ದಾರೆ.

See also  ಮತದಾನ ಮಾಡದವರು ಬದುಕಿದ್ದೂ ಸತ್ತಂತೆ..! ಸತ್ತ ಪ್ರಜೆಗಳಿಗೆ ನಮ್ಮ ಶ್ರದ್ದಾಂಜಲಿ, ಸಿಟ್ಟಿಗೆದ್ದ ಜನರಿಂದ ಬ್ಯಾನರ್ ಅಳವಡಿಕೆ
  Ad Widget   Ad Widget   Ad Widget   Ad Widget   Ad Widget   Ad Widget