ಕ್ರೈಂವೈರಲ್ ನ್ಯೂಸ್ಸಿನಿಮಾ

ಲೈಂಗಿಕ ಕಿರುಕುಳ ಆರೋಪ: ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಿದ ಸಚಿವಾಲಯ..! ಇಲ್ಲಿದೆ ಸಂಪೂರ್ಣ ಮಾಹಿತಿ

262

ನ್ಯೂಸ್ ನಾಟೌಟ್: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತ್ತು ಮಾಡಿದೆ.

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ, ಅಕ್ಟೋಬರ್ 3 ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.
‘ತಿರುಚಿತ್ರಂಬಲಂ’ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತ್ತುಗೊಳಿಸಿದೆ.

ಅಕ್ಟೋಬರ್ 8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Click

https://newsnotout.com/2024/10/indian-girl-pooja-marriage-with-pak-cricketer-kannada-news/
https://newsnotout.com/2024/10/police-station-kannada-news-fire-issue-viral-news/
https://newsnotout.com/2024/10/kota-shrinivas-poojari-kannada-news-fake-account-for-money-jd/
https://newsnotout.com/2024/10/govt-site-agricultural-kannada-news-krishna-bhairegowda-kannada-news/
https://newsnotout.com/2024/10/online-booking-compulsory-kannada-news-shabari-male-devotees/
See also  ಕೋಟ್ಯಾಧೀಶ್ವರನ 26 ವರ್ಷದ ಪುತ್ರಿ ಎಲ್ಲವನ್ನೂ ತೊರೆದು ಸನ್ಯಾಸತ್ವ ಸ್ವೀಕಾರ..! ಕೊನೆಯದಾಗಿ ಹೊಸ ಬಟ್ಟೆ, ಚಿನ್ನಾಭರಣ ಧರಿಸಿ ಮೆರವಣಿಗೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget