Latestಕರಾವಳಿಕ್ರೈಂದಕ್ಷಿಣ ಕನ್ನಡದೇಶ-ವಿದೇಶರಾಜ್ಯ

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು..! ಪಂಜಾಬ್ ಗೆ ಪ್ರಯಾಣ ಬೆಳೆಸಿದ ಕುಟುಂಬಸ್ಥರು..!

1.1k

ನ್ಯೂಸ್‌ ನಾಟೌಟ್: ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದೆ.

ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು, ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ‌ ನಿಗೂಢವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಸಾವಿನ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

ಇಟಲಿ ಪ್ರಧಾನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯಾ ದೇಶದ ಪ್ರಧಾನಿ..! ಇಲ್ಲಿದೆ ವಿಡಿಯೋ

ಇಸ್ರೋ ಇಂದು(ಮೇ.18) ಉಡಾವಣೆ ಮಾಡಿದ ಉಪಗ್ರಹ ಕಕ್ಷೆ ಸೇರುವಲ್ಲಿ ವಿಫಲ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಕಲ್ಲುಗುಂಡಿಯ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ವಿದ್ಯಾರ್ಥಿಗಳು ಮೆಚ್ಚಿದ ಶಿಕ್ಷಕಿ ಇನ್ನಿಲ್ಲ, ನೂರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದ ಯಶೋಧ ಟೀಚರ್ ನಿಧನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget