Latestಕ್ರೈಂರಾಜ್ಯ

ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಹರಿದ ಬಸ್..! ಇಬ್ಬರು ಸ್ಥಳದಲ್ಲೇ ಸಾವು..!

1.5k
Pc Cr: TV 9 kannada

ನ್ಯೂಸ್ ನಾಟೌಟ್: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ರಾತ್ರಿ(ಫೆ.22) ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್‌ ಎಂಬುವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

See also  ತನಗೆ ಕಚ್ಚಿದ ಹಾವನ್ನೇ ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಭೂಪ..! ಮುಂದೇನಾಯ್ತು..? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget