ಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ಇಂದು(ಜೂ.15) ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

248

ನ್ಯೂಸ್ ನಾಟೌಟ್: ನಟ ದರ್ಶನ್ (Darshan) ಹಾಗೂ ಗ್ಯಾಂಗ್ ​ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಪ್ರಕರಣಕ್ಕೆ ದಿನಕ್ಕೊಂದು ಸಾಕ್ಷ್ಯಗಳು ದೊರೆಯುತ್ತಿವೆ. ಈ ಪ್ರಕರಣದ ತನಿಖೆ ಭರದಿಂದ ಸಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳನ್ನು ಇಂದು(ಜೂನ್ 15) ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ.

ಹಾಗಾಗಿ ಇಂದು ಅಥವಾ ನಾಳೆಯೊಳಗೆ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ದರ್ಶನ್ ಪ್ರಭಾವಿ ವ್ಯಕ್ತಿ. ಒಂದೊಮ್ಮೆ ಇವರನ್ನು ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು ಎನ್ನಲಾಗಿದೆ, ಜೊತೆಗೆ ಸಾಕ್ಷ್ಯ ನಾಶದ ಸಾಧ್ಯತೆಯೂ ಇದೆ. ಆಗ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂದು ಹೇಳಲಾಗುತ್ತಿದೆ. ಕೋರಮಂಗಲದ ಜಡ್ಜ್​​​​ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ.

ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಸ್ವಇಚ್ಛಾ ಹೇಳಿಕೆ ದಾಖಲು ಮಾಡಲಾಗಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಕಿಡ್ನ್ಯಾಪ್ ಆದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮುಗಿದಿದೆ. ಸಾಂಧರ್ಬಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

Click 👇

https://newsnotout.com/2024/06/film-chember-issue-banning-darshan-and-visiting/
See also  ಮೈಸೂರಿನ ಫೋಟೋಗ್ರಾಫರ್ ಈಶ್ವರ ಮಂಗಲದಿಂದ ನಿಗೂಢ ಕಣ್ಮರೆ, ಹಲವು ಅನುಮಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget