ಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್ ಗ್ಯಾಂಗ್ ನ​ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್​ 6 ಕ್ಕೆ ಮುಂದೂಡಿಕೆ..! ಪವಿತ್ರಾ ಗೌಡ ಪರ ವಕೀಲರ ವಾದವೇನು..?

262

ನ್ಯೂಸ್ ನಾಟೌಟ್: ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ರೆಗ್ಯುಲರ್​ ಬೇಲ್​ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹೈಕೋರ್ಟ್​ನಲ್ಲಿ ವಾದ-ಪ್ರತಿವಾದಗಳು ನಡೆಯುತ್ತಿದೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್​ 6ಕ್ಕೆ ಮುಂದೂಡಿಕೆ ಮಾಡಲಾಗಿದೆ.

ದರ್ಶನ್​ ಪರವಾಗಿ ಹಿರಿಯ ಲಾಯರ್​ ಸಿ.ವಿ. ನಾಗೇಶ್ ಇತ್ತೀಚೆಗೆ ಹೈಕೋರ್ಟ್​ನಲ್ಲಿ ವಾದ ಮಂಡನೆ ಮಾಡಿದ್ದರು. ಇಂದು (ಡಿ.3) ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದಿಸಿದ್ದಾರೆ. ಪವಿತ್ರಾ ಗೌಡಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಎಲ್ಲರೂ ಹೊಡೆದ ಕಾರಣದಿಂದ ರೇಣುಕಾಸ್ವಾಮಿ ಸಾವು ಸಂಭವಿಸಿರಬಹುದು ಎಂದು ವಾದ ಮಾಡಲಾಗಿದೆ.

ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಡಿಸೆಂಬರ್​ 6ರಂದು ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಾಡಲಿದ್ದಾರೆ. ಆ ಬಳಿಕ ಜಾಮೀನಿಗೆ ಸಂಬಂಧಿಸಿದ ತೀರ್ಪನ್ನು ಹೈಕೋರ್ಟ್ ನೀಡಲಿದೆ. ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಅವರ ಜೈಲುವಾಸ ಮುಂದುವರಿಯಲಿದೆ.

Follow us for more updates:

FB PAGE : https://www.facebook.com/NewsNotOut2023

Insta : https://www.instagram.com/newsnotout/

YouTube : https://www.youtube.com/@newsnotout8209

Website : https://newsnotout.com/

Join our Telegram: https://t.me/+ZnCGhAIeG9QxODRl

Tweet : https://twitter.com/News_Not_Out

See also  ಶಾಶ್ವತವಾಗಿ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ ಕೋರ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget