ಕ್ರೀಡೆ/ಸಿನಿಮಾಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್ ಪ್ರಕರಣ: ತಡರಾತ್ರಿ ಪವಿತ್ರಾ ಗೌಡ ಮ್ಯಾನೇಜರ್ ನನ್ನು ವಶಕ್ಕೆ ಪಡೆದ ಪೊಲೀಸ್..! ಇಂದು(ಜೂ.16) ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು..! 10 ಮೊಬೈಲ್ ಗಳು ಜಪ್ತಿ..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ರಸ್ತೆಯಲ್ಲಿ ದೇವರಾಜ್‌ ನನ್ನು ವಶಕ್ಕೆ ಪಡೆಯಲಾಗಿದೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಪವಿತ್ರಾ ಗೌಡ ಮನೆಯಲ್ಲಿ ಇಂದು(ಜೂ.16) ಪೊಲೀಸರು ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ರೇಣುಕಾ ಸ್ವಾಮಿ ಮೇಲೆ ಮೊದಲು ಹಲ್ಲೆ ನಡೆಸಿದ್ದೇ ಪವಿತ್ರಾ ಗೌಡ ಎನ್ನಲಾಗಿದೆ.

ಪವಿತ್ರಾಗೌಡನನ್ನು ನೋಡುತ್ತಿದ್ದಂತೆ ರೇಣುಕಾಸ್ವಾಮಿ ಪವಿತ್ರಾ ಕಾಲಿಗೆ ಬಿದ್ದು ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದನಂತೆ. ಸದ್ಯ ಪವಿತ್ರಾ ಮನೆಯಲ್ಲಿ ಪೊಲೀಸರು ಆ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ ಚಪ್ಪಲಿಯನ್ನ ಸೀಜ್ ಮಾಡಲಿದ್ದಾರೆ. ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಲೆಗೆ ಬಳಸಿದ ಆಯುಧಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಪ್ರಕರಣದಲ್ಲಿ ಪವಿತ್ರಾ ಚಪ್ಪಲಿ ಕೂಡ ಮಹತ್ವದ ಸಾಕ್ಷ್ಯವಾಗಲಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/darshan-and-gang-issue-gold-kannada-news
https://newsnotout.com/2024/06/hair-cutting-shop-owner-misbehaviour-police-issue
https://newsnotout.com/2024/06/viral-news-company-interview-kannada-news

Related posts

ಉಪಚುನಾವಣೆ ಮತದಾನದ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ ಗಳು ಪತ್ತೆ..!ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಹೇಳಿದ್ದೇನು..?

ಮಾಲ್‌ ನಲ್ಲಿ ಮಹಿಳೆಯ ಜೊತೆ ಅನುಚಿತ ವರ್ತನೆ ಪ್ರಕರಣದ ಆರೋಪಿ ಕೋರ್ಟ್‌ಗೆ ಸರೆಂಡರ್! ಪೊಲೀಸರಿಂದ ತಲೆಮರೆಸಿಕೊಂಡಿದ್ದಾತನಿಗೆ ಜಾಮೀನು..?

ಆರ್ಡರ್ ಮಾಡಿದ್ದು 90K INR ಕ್ಯಾಮೆರಾ ಲೆನ್ಸ್ ಆದರೆ ಗ್ರಾಹಕನಿಗೆ ತಲುಪಿದ್ದು ಮಾತ್ರ ಕಿನೋವಾ ಬೀಜಗಳು..!, ಏನಿದು ಆನ್​ಲೈನ್​ ಶಾಪಿಂಗ್ ಅವಾಂತರ..?