ಕರಾವಳಿಕ್ರೈಂಬೆಂಗಳೂರುಸಿನಿಮಾ

ದರ್ಶನ್ ಪ್ರಕರಣ: ರಾಗಿಣಿ, ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ನಾ..? ‘ಚಾರ್ಜ್‌ಶೀಟ್’ನಲ್ಲಿವೆ ಸ್ಪೋಟಕ ರಹಸ್ಯಗಳು..!

232

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ಗೆ ಸಲ್ಲಿಸಲಾದ ಚಾರ್ಜ್‌ಶೀಟ್‌ ನಲ್ಲಿ ಸ್ಫೋಟಕ ವಿಷಯಗಳು ಬಹಿರಂಗವಾಗುತ್ತಿವೆ. ಸ್ವಾಮಿ ಕೊಲೆಯ ಇಂಚಿಂಚು ಮಾಹಿತಿಗಳು ಹೊರ ಬರುತ್ತಿವೆ. ಅದರಲ್ಲೂ ಈ ಕೊಲೆ ನಡೆದಿದ್ದು ಪವಿತ್ರಾಳಿಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋ ಕಾರಣಕ್ಕೆ ಎನ್ನುವುದರ ಜೊತೆಗೆ ಇನ್ನೂ ಹಲವರಿಗೆ ಇದೇ ರೀತಿ ಫೇಕ್ ಖಾತೆ ಮೂಲಕ ಸಂದೇಶಗಳನ್ನು ಕಳುಹಿಸಿದ್ದ ಎನ್ನಲಾಗಿದೆ.

ಕನ್ನಡದ ಸ್ಟಾರ್ ನಟಿಯರಿಗೂ ಅವನು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎನ್ನುವುದು ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ (Ragini Dwivedi), ಶುಭಾ ಪೂಂಜಾ (Shubha Poonja) ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಈ ಮಾಹಿತಿಯನ್ನು ಕೊಲೆ ಅರೋಪಿಗಳಲ್ಲಿ ಇಬ್ಬರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಉಲ್ಲೇಖವಾಗಿದೆ.

ರೇಣುಕಾಸ್ವಾಮಿ ಮೊಬೈಲ್ ನಲ್ಲಿ ನಾವು ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನಾವು ನೋಡಿದ್ದೇವೆ ಎಂದು ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. ಅವರ ಮಾತುಗಳನ್ನು ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ.

See also  ಸುಳ್ಯ: CITU ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ, 60 ವರ್ಷ ಪ್ರಾಯದ ನಿವೃತ್ತ ಕಾರ್ಮಿಕರಿಗೆ ರೂ.1 ಲಕ್ಷ ನೀಡುವಂತೆ ಒತ್ತಾಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget