ಕ್ರೈಂದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ದರ್ಶನ್ ಇನ್ನೂ ಕೃಷಿ ಇಲಾಖೆಯ ರಾಯಭಾರಿಯಾಗಿಯೇ ಇರ್ತಾರಾ..? ಸಚಿವ ಎಂ.ಬಿ ಪಾಟೀಲ್ ಈ ಬಗ್ಗೆ ಹೇಳಿದ್ದೇನು..?

268

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

ನಟ ದರ್ಶನ್ (Darshan) ಹಾಗೂ ಗ್ಯಾಂಗ್ ​ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಪ್ರಕರಣಕ್ಕೆ ದಿನಕ್ಕೊಂದು ಸಾಕ್ಷ್ಯಗಳು ದೊರೆಯುತ್ತಿವೆ. ಈ ಪ್ರಕರಣದ ತನಿಖೆ ಭರದಿಂದ ಸಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳನ್ನು ಇಂದು(ಜೂನ್ 15) ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ.

Click 👇

https://newsnotout.com/2024/06/film-chember-issue-banning-darshan-and-visiting
https://newsnotout.com/2024/06/darshan-and-gang-issue-today-future-decisions-have-been-decided
See also  ವಿಟ್ಲ:18 ದಿನಗಳ ಬಳಿಕ ದಫನ ಮಾಡಿದ ಮೃತದೇಹ ಹೊರತೆಗೆದು ತನಿಖೆ..! ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದಿದ್ದ ಪತ್ನಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget