ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ ಎಂದ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಖಡಕ್ ಸೂಚನೆ..!

241

ನ್ಯೂಸ್ ನಾಟೌಟ್: ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರಗೊಂಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ&ಐಜಿಪಿ ಅಲೋಕ್​ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್​ ಸೂಚನೆ ನೀಡಿದರು.
ಕೂಡಲೆ ದರ್ಶನ್ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ​​ನಲ್ಲಿ ಟ್ವೀಟ್​​ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತ್ತು ಮಾಡುವಂತೆ ಸೂಚಿಸಿದ್ದೇನೆ” ಎಂದಿದ್ದಾರೆ.

“ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್​ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿದ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಎಂದು ಖಡಕ್​ ಸೂಚನೆ ನೀಡಿದ್ದಾರೆ.

Click

https://newsnotout.com/2024/08/kasaragodu-govt-kananda-news-engineer-viral-news/
https://newsnotout.com/2024/08/facebook-post-kannada-news-bangladesh-video-kannada-news-agent/
https://newsnotout.com/2024/08/mysore-note-print-office-kannada-news-employement/
See also  ಪುತ್ತೂರು: ಆನ್ ಲೈನ್ ನಲ್ಲಿ ಡ್ರಮ್ ಖರೀದಿಸಿದ ಉದ್ಯಮಿಗೆ ಉಂಡೆನಾಮ..! ಮೂರು ಹಂತದಲ್ಲಿ ಹಣ ಪೀಕಿದ ವಂಚಕರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget