ಕ್ರೈಂದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್ ಮೇಲೆ ಒಂದಲ್ಲ 3 ಕೇಸ್‌ ದಾಖಲು..! ದರ್ಶನ್ ಅಭಿಮಾನಿಗಳ ಜಿಲ್ಲಾಧ್ಯಕ್ಷನೂ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

245

ನ್ಯೂಸ್ ನಾಟೌಟ್: ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಕೊಲೆ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟಿದ್ದಾರೆ. ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ದರ್ಶನ್‌ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 364ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ಇನ್ನು ಗೋಡೌನ್‌ನಲ್ಲಿ ಇರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹಾಗಾಗಿ, ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕೇಸ್‌ ದಾಖಲಾಗಲಿದೆ.(Challenging Star Darshan arrested)

ಇನ್ನು ಹತ್ಯೆ ಬಳಿಕ ಶವವನ್ನು ಬಿಸಾಕಿದ ಕಾರಣ ಸಾಕ್ಷ್ಯ ನಾಶದ ಪ್ರಕರಣವನ್ನೂ ಸೇರಿಸಲಾಗುತ್ತದೆ. ಹಾಗಾಗಿ, ಯಾವ ಪ್ರಕರಣಗಳಲ್ಲಿ ಆರೋಪ ಸಾಬೀತಾದರೂ ದರ್ಶನ್‌ ಅವರಿಗೆ ಜೈಲು ಶಿಕ್ಷೆಯಾಗಲಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/06/challenging-star-darshan-arrested-in-process
https://newsnotout.com/2024/06/bike-father-sister-and-son-conflict-kannada-news
https://newsnotout.com/2024/06/kannada-news-hd-devegowda-and-narendra-modi-call
See also  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget