ಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

Darshan Thoogudeepa Case: ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ ಗೃಹಸಚಿವ..! ದರ್ಶನ್ ಮೇಲೆ ರೌಡಿಶೀಟರ್..?

252

ನ್ಯೂಸ್ ನಾಟೌಟ್: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮತ್ತೆ(ಜೂ.12) ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ​​​ ದರ್ಶನ್​ ಗೆಳತಿ ಬಗ್ಗೆ ರೇಣುಕಾ ಸ್ವಾಮಿ ಅಶ್ಲೀಲ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ.

ಹಾಗೆ ಮಾಡಿದ್ದರೆ ಈ ಬಗ್ಗೆ ದೂರು ನೀಡಬಹುದಿತ್ತು. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ದೂರು ನೀಡಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರು ಎಂದಿದ್ದಾರೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಆರೋಪ ಸಾಬೀತಾದರೆ ರೌಡೀ ಶೀಟರ್ ದಾಖಲಿಸುವುದರ ಬಗ್ಗೆ ಮುಂದೆ ಚಿಂತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ.

Click 👇

https://newsnotout.com/2024/06/darshan-case-they-demands-a-lot-under-police-custody
https://newsnotout.com/2024/06/darshan-and-gang-plan
https://newsnotout.com/2024/06/anupam-agarwal-reacts-on-mangaluru-vijayothsava-issue
https://newsnotout.com/2024/06/vijaya-lakshmi-darshan-insta-unfollowed-by-wife
See also  ನಕಲಿ ವೈದ್ಯ ಅಬ್ದುಲ್ ನ ಫಾರ್ಮ್ ಹೌಸ್‌ ನಲ್ಲಿ ಹೂತಿಟ್ಟ ಭ್ರೂಣಗಳು ಪತ್ತೆ..! ಮಕ್ಕಳ ಮಾರಾಟ ಜಾಲದ ಕರಾಳತೆ ಕಂಡು ಬೆಚ್ಚಿಬಿದ್ದ ಪೊಲೀಸರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget