ಕ್ರೈಂವೈರಲ್ ನ್ಯೂಸ್ಸಿನಿಮಾ

Darshan Thoogudeepa: ನಟ ದರ್ಶನ್ ನನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ ಫ್ಯಾನ್ಸ್‌..! ಪೊಲೀಸರಿಂದ ಲಾಠಿ ಚಾರ್ಜ್‌..!

ನ್ಯೂಸ್ ನಾಟೌಟ್: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ನನ್ನು ನೋಡಲು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಇಂದು(ಜೂ.12) ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿದೆ.

ನೆಚ್ಚಿನ ನಟನನ್ನು ನೋಡಲು ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ ಮತ್ತು ಘೋಷಣೆ ಕೂಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲು ಸಿದ್ಧತೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ನೆರೆದಿರುವುದರಿಂದ ಪೊಲೀಸರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಇರಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Click 👇

https://newsnotout.com/2024/06/darshan-case-they-demands-a-lot-under-police-custody
https://newsnotout.com/2024/06/fir-on-darshan-forest-department-kannada-news
https://newsnotout.com/2024/06/anupam-agarwal-reacts-on-mangaluru-vijayothsava-issue
https://newsnotout.com/2024/06/darshan-pavithra-gowda-kannada-issue-renuka-swami-message
https://newsnotout.com/2024/06/vijaya-lakshmi-darshan-insta-unfollowed-by-wife

Related posts

ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧಿಸಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ಯಾರು? ಅರ್ಜಿದಾರರಿಗೆ ಹೈಕೋರ್ಟ್ ಹೇಳಿದ್ದೇನು?

ಬುರ್ಖಾ ಧರಿಸಿ ಕಾಲಿ ಬಿಂದಿಗೆ ಹಿಡಿದು ಬಂದ ವಾಟಾಳ್ ನಾಗರಾಜ್..! ವಾಟಾಳ್ ವೇಷ ವಿವಾದಕ್ಕೆ ತಿರುಗಲಿದೆಯಾ? ಯಾಕೆ ಈ ಹೊಸಾ ಅವತಾರ?

ರೈಲು ನಿಲ್ದಾಣಗಳಲ್ಲಿ 100 ಜನೌಷಧಿ ಕೇಂದ್ರಗಳು ಆರಂಭ, ಈ ಬಗ್ಗೆ ರೈಲ್ವೆ ಅಧಿಕಾರಿಗಳು ಹೇಳಿದ್ದೇನು..?