ಕರಾವಳಿಕ್ರೈಂವೈರಲ್ ನ್ಯೂಸ್ಸಿನಿಮಾ

ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್..! ಕಾರಾಗೃಹಕ್ಕೆ ಆಗಮಿಸಿದ ಅಭಿಮಾನಿಗಳು, ಸಿ.ಆರ್.ಪಿ.ಎಫ್ ತುಕಡಿಗಳಿಂದ ಭದ್ರತೆ..!

234

ನ್ಯೂಸ್ ನಾಟೌಟ್ : ಆರೋಪಿ ದರ್ಶನ್ ರನ್ನು ಪೊಲೀಸರು ಇಂದು(ಆ.29) ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ.
ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ವಾಹನಗಳ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿಗೆ ತರಲಾಯಿತು.

ಬೆಳಗ್ಗೆ 4 ಗಂಟೆಯ ವೇಳೆಗೆ ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕ, ಚಿಕ್ಕಬಳ್ಳಾಪುರ ಮಾರ್ಗವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಗಿದೆ.

ಕಾರಾಗೃಹಕ್ಕೆ ದರ್ಶನ್ ಆಗಮನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಾರಗೃಹಕ್ಕೆ ತೆರಳುವ ಮಾರ್ಗದ ಎರಡು ಬದಿಯಲ್ಲಿ ಬ್ಯಾರಿಕೇಡ್ ಗಳನ್ನು ನಿರ್ಮಿಸಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದರ್ಶನ ಪ್ರವೇಶಿಸುವ ಕನಕ ದುರ್ಗಮ್ಮ ಮಾರ್ಗದ ರಸ್ತೆಯಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ವರು ಸಿಪಿಐ ಅಧಿಕಾರಿಗಳನ್ನು, ಸಿಆರ್ ಪಿಎಫ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಿದ್ದು, ಜೈಲು ಮಾರ್ಗದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

See also  ಕಾಮುಕ ಶಿಕ್ಷಕ ಸಾದಿಕ್ ಬೇಗ್ ನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಪಾಠ..! ರಾತೋರಾತ್ರಿ ಬಂಧಿಸಿ ಜೈಲಿಗಟ್ಟಿದ ಪೊಲೀಸರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget