ನ್ಯೂಸ್ ನಾಟೌಟ್: ನಟ ದರ್ಶನ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಳಿಕ ಜಾಮೀನು ಪಡೆದು ಹೊರಬಂದಿದ್ದಾರೆ. ಈ ಜಾಮೀನನ್ನು ಪ್ರಶ್ನಿಸಿ ಪೊಲೀಸರು ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಇಂದು (ಜನವರಿ 24) ನಡೆದಿದೆ. ಈ ವೇಳೆ ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾಸ್ವಾಮಿ ಕೊಲೆ ಕೇಸ್ ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ‘ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ’ ಎಂದು ಮನವಿ ಮಾಡಿದ್ದಾರೆ.
7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದು, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಪ್ರಭಾವ ಬಳಸಿ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂದು ಪೊಲೀಸರು ಆತಂಕ ಹೊರಹಾಕಿದ್ದಾರೆ. ಇದಲ್ಲದೆ, ಹೈಕೋರ್ಟ್ ಪರಿಗಣಿಸದ ಹಲವು ಅಂಶಗಳನ್ನು ಇದರಲ್ಲಿ ಹೇಳಲಾಗಿದೆ. ಈ ಬಗ್ಗೆ ಮುಂದೆ ಸುಪ್ರಿಂಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ದರ್ಶನ್ ಮತ್ತು ಸಹಚರರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.
Click