Latestಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್ ಕೋರ್ಟ್‌ಗೆ ಬೆನ್ನು ನೋವಿನ ನೆಪ ಹೇಳಿ ಗೈರು, ಸಿನಿಮಾ ವೀಕ್ಷಣೆಗೆ ಹಾಜರು..! ಮಾಲ್‌ ನಲ್ಲಿ ವಾಮನ ಚಿತ್ರದ ವಿಶೇಷ ಶೋ

638

ನ್ಯೂಸ್ ನಾಟೌಟ್: ಬೆನ್ನು ನೋವಿನ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಗೈರಾಗಿದ್ದ ದರ್ಶನ್‌ ಗೆಳೆಯ ಧನ್ವೀರ್‌ ಅಭಿನಯದ ವಾಮನ ಸಿನಿಮಾವನ್ನು ವೀಕ್ಷಣೆಗೆ ಥಿಯೇಟರ್ ಗೆ ಹೋಗಿ ನೋಡಿದ್ದಾರೆ.

ಬುಧವಾರ(ಎ.9) ರಾತ್ರಿ ಜಿಟಿ ಮಾಲ್‌ ನಲ್ಲಿ ವಾಮನ ಚಿತ್ರದ ವಿಶೇಷ ಶೋ ಆಯೋಜಿಸಲಾಗಿತ್ತು. ಈ ಶೋ ವೀಕ್ಷಿಸಲು ದರ್ಶನ್‌ ರಾತ್ರಿ 8 ಗಂಟೆಯ ವೇಳೆಗೆ ಮಾಲ್‌ ಗೆ ಆಗಮಿಸಿದ್ದರು.

ಬೆನ್ನು ನೋವನ್ನು ಲೆಕ್ಕಿಸದೇ ಆಪ್ತನ ಸಿನಿಮಾವನ್ನು ದರ್ಶನ್‌ ಸುಮಾರು ಮೂರು ಗಂಟೆಗಳ ಕಾಲ ಕುಳಿತು ವೀಕ್ಷಿಸಿದ್ದಾರೆ. ಮಾಲ್‌ ನಲ್ಲಿ ದರ್ಶನ್ ನನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು.

ಏ.8 ರಂದು ದರ್ಶನ್‌ 57ನೇ ಸಿಸಿಹೆಚ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದ್ದರು.

ಈ ವೇಳೆ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಮಂಗಳವಾರದ ವಿಚಾರಣೆಗೆ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳು ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಕೋರ್ಟ್‌ ಜಾಮೀನು ನೀಡಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.

ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜಿಯೋದಿಂದ ಉಚಿತ ಇಂಟರ್ನೆಟ್..! 2000 ಬೂಸ್ಟರ್‌ ಸೆಲ್‌ ಗಳನ್ನು ಅಳವಡಿಸಿದ ಜಿಯೋ..!

19 ವರ್ಷದ ಯುವತಿ ಮೇಲೆ 7 ದಿನ 23 ಮಂದಿಯಿಂದ ಅತ್ಯಾಚಾರ..! ಇನ್ ಸ್ಟಾಗ್ರಾಮ್ ಸ್ನೇಹಿತರಿಂದಲೇ ಕೃತ್ಯ..!

See also  ಕೋಟಿಗಟ್ಟಲೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಬೆಂಬಲಕ್ಕೆ ನಿಂತರಾ ಕೇಂದ್ರ ಸಚಿವೆ? ಶೋಭಾ ಕರಂದ್ಲಾಜೆ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget