ದೇಶ-ವಿದೇಶರಾಜ್ಯವೈರಲ್ ನ್ಯೂಸ್

ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳಲು ಬಿಡಬಾರದು ಎಂದ ಯದುವೀರ್..! ಮಹಿಷಾ ದಸರಾ ಆಚರಣೆಯ ಬಗ್ಗೆ ಸಂಸದರು ಹೇಳಿದ್ದೇನು..?

ನ್ಯೂಸ್‌ ನಾಟೌಟ್‌: ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳುವವರಿಗೆ ಕಡಿವಾಣ ಹಾಕಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಅರಮನೆ ಆವರಣದಲ್ಲಿ ಕಂಜನ್ ಮತ್ತು ಧನಂಜಯ್ ಆನೆಗಳ ಜಗಳ ವಿಚಾರವಾಗಿ ಮಾತನಾಡಿ, ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ ವಿಡಿಯೋ ನೋಡಿದ್ದೇನೆ. ಇದು ಜನರಿಂದ ಆಗಿರುವುದಲ್ಲ ಎಂದು ವರದಿ ಬಂದಿದೆ. ಭದ್ರತೆಯನ್ನು ಇನ್ನಷ್ಟು ಹೆಚ್ಚು ಮಾಡಬೇಕು. ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಆನೆಗಳ ಮುಂದೆ ಫೋಟೊ, ವಿಡಿಯೋ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು ಎಂದಿದ್ದಾರೆ.

ಮಹಿಷಾ ದಸರಾ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಂವಿಧಾನ ದೃಷ್ಟಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಡಿದರೆ ತೊಂದರೆ ಇಲ್ಲ. ಯಾರಿಗೂ ಯಾವುದೇ ರೀತಿಯ ಹಾನಿಯಾಗದ ರೀತಿ ಕಾರ್ಯಕ್ರಮ ಮಾಡಿಕೊಳ್ಳಬಹುದು. ಅದನ್ನ ಯಾರು ನಿಲ್ಲಿಸಲು ಸಾಧ್ಯವಿಲ್ಲ. ತಾಯಿ ಚಾಮುಂಡೇಶ್ವರಿಯಲ್ಲಿ ನಂಬಿಕೆಯಿಟ್ಟ ಎಲ್ಲರೂ ಮತ್ತು ಧರ್ಮದಲ್ಲಿ ನಂಬಿಕೆ ಇಟ್ಟ ಎಲ್ಲರ ಭಾವನೆಗೆ ಧಕ್ಕೆಯಾಗದ ರೀತಿ ನೋಡಿಕೊಳ್ಳಿ ಎಂದಿದ್ದಾರೆ.

Click

https://newsnotout.com/2024/09/chartered-accounten-nomore-kannada-news-mother-of-that-employee-wrote-a-latter-to-officer/
https://newsnotout.com/2024/09/muniratna-supporters-threate-to-evidence-kannada-news-case-bengaluru/
https://newsnotout.com/2024/09/kollegala-car-kannada-news-friday-near-bus-stand-police-issue/
https://newsnotout.com/2024/09/digital-upi-payment-innovation-by-auto-driver-kannada-news/
https://newsnotout.com/2024/09/bengaluru-express-train-fire-kannada-news-viral-news-fire/
https://newsnotout.com/2024/09/mangaluru-panamburu-beach-kannada-news-nomore-issue/

Related posts

ಅವಕಾಶ ಕೊಟ್ಟರೆ ಭಾರತಕ್ಕೆ ಹೋಗಿ ಸೆಟಲ್ ಆಗುತ್ತೇವೆ , ಪಾಕಿಸ್ತಾನದ ಯುವಕರು ಹೀಗೆ ಹೇಳಿದ್ಯಾಕೆ..?

ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ(ಮೇ.22)14 ವರ್ಷ..! ಶ್ರದ್ಧಾಂಜಲಿ ಕಾರ್ಯಕ್ರಮ

ಪ್ರಜ್ವಲ್ ರೇವಣ್ಣ ಡ್ರೈವರ್ ನಾಪತ್ತೆ..! ವಿಡಿಯೋ ನೀಡಿದ್ದು ನಾನೇ ಎಂದಿದ್ದ ಕಾರ್ತಿಕ್..!