ಕ್ರೈಂ

ಅಕ್ರಮ ಸಂಬಂಧಕ್ಕಾಗಿ ತಾಯಿಯನ್ನೇ ಸಂಪ್ ಗೆ ತಳ್ಳಿ ಕೊಂದ ಅಣ್ಣ-ತಂಗಿ..!

333
Spread the love

ತುಮಕೂರು: ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದು ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ ಅಣ್ಣನ ಜೊತೆ ಸೇರಿ ತಾಯಿಯನ್ನೇ ಮಗಳು ಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಕಳೆದ ಜನವರಿ 30 ರಂದು ಕೊರಟಗೆರೆ ಪಟ್ಟಣದ ಸಜ್ಜನರಾವ್ ಬೀದಿಯ ಸಾವಿತ್ರಮ್ಮ(45) ( ಸಂಪಿಗೆ ಬಿದ್ದು ಸಾವನ್ನಪ್ಪಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸರು ಪ್ರೀತಿಗೆ ಅಡ್ಡ ಬಂದರೆಂದು ಉಸಿರುಗಟ್ಟಿಸಿ ಸಾವಿತ್ರಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು. ಇಬ್ಬರ ಲವ್ವಿ ಡವ್ವಿಗೆ ಬ್ರೇಕ್ ಹಾಕಿ ಪುನೀತ್ ಹಾಗೂ ಶೈಲಜಾಗೆ ಸಾವಿತ್ರಮ್ಮ ಹಾಗೂ ಪುನೀತ್ ತಾಯಿ ಬುದ್ಧಿ ಹೇಳಿದ್ದರು. ಈ ಕಾರಣಕ್ಕಾಗಿ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

See also  Actor Dhanush: ಖ್ಯಾತ ನಟ ಧನುಷ್ ಮತ್ತು ನನ್ನ ಪತಿ ಸಲಿಂಗಕಾಮಿಗಳು ಎಂದು ಹೇಳಿದ್ದ ಗಾಯಕಿ ಸುಚಿತ್ರಾ..! ಆಕೆಗೆ ಮತ್ತು ವಿಡಿಯೋ ಮಾಡಿದ್ದ ಯೂಟ್ಯೂಬ್ ಚಾನೆಲ್ ಗೆ ಲೀಗಲ್ ನೋಟಿಸ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget