ನ್ಯೂಸ್ ನಾಟೌಟ್: ಇತ್ತೀಚೆಗೆ ದಾವಣಗೆರೆಯಲ್ಲಿ ಕೊಲೆ ಪ್ರಕರಣಗಳ ಹೆಚ್ಚಳ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಪರಾಧ ತಡೆ ನಿಟ್ಟಿನಲ್ಲಿ ಪೊಲೀಸರು ಗುರುವಾರ(ಮೇ.15) ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧಿಕ್ಷರಾದ ವಿಜಯ್ ಕುಮಾರ್ ಎಂ ಸಂತೋಷ್, ಜಿ. ಮಂಜುನಾಥ್ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ನಗರ ಡಿವೈಎಸ್ಪಿ ಬಿ. ಶರಣ ಬಸವೇಶ್ವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ತಂಡ ಒಟ್ಟು 52 ರೌಡಿಶೀಟರ್ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರವಾಗಿ ವಸ್ತುಗಳು ಕಂಡು ಬಂದಿಲ್ಲ ಎನ್ನಲಾಗಿದೆ.. ಯಾವುದೇ ಕಾನೂನು ಬಾಹಿರ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಕೃತ್ಯಗಳಲ್ಲಿ ತೊಡಗಬಾರದು. ಅಂತಹದ್ದು ಕಂಡು ಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ..! ಮಂಗಳೂರಿನಲ್ಲಿ 4 ಕಡೆ ರೈಡ್..!
ಸೇನಾ ಕಾರ್ಯಾಚರಣೆಯಲ್ಲಿ 10 ಉಗ್ರರ ಹತ್ಯೆ..! ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಕ್ಕೆ..!