Latest

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ;ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

817

ನ್ಯೂಸ್‌ ನಾಟೌಟ್:ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಕೊಲೆಗೀಡಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಈ ಆದೇಶದನ್ವಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.

See also  ಲೇಡಿ ಸಬ್ ಇನ್ಸ್‌ ಪೆಕ್ಟರ್ ಬರೆದ ರಜಾ ಅರ್ಜಿಯಲ್ಲಿ ಸಿಕ್ಕಾಪಟ್ಟೆ ಸ್ಪೆಲ್ಲಿಂಗ್​ ಮಿಸ್ಟೆಕ್ ಕಂಡು ಅಧಿಕಾರಿಗಳಿಗೆ ಶಾಕ್..! ತನಿಖೆಯ ಬಳಿಕ ಆಕೆ ಅರೆಸ್ಟ್..!
  Ad Widget   Ad Widget   Ad Widget   Ad Widget