ಸುಳ್ಯ

ಸುಳ್ಯ: ಡಿ.4ರಂದು ‘ಪಂಚಾಯತ್ ರಾಜ್ ಸಮಾವೇಶ’ ಆಯೋಜನೆ, ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಹೇಳಿದ್ದೇನು..?

ನ್ಯೂಸ್ ನಾಟೌಟ್: ಡಿ.4ರಂದು ಬೆಳಗ್ಗೆ 10.30ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ‘ಪಂಚಾಯತ್ ರಾಜ್ ಸಮಾವೇಶ’ ನಡೆಸಲು ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ನಿರ್ಧರಿಸಿದೆ.

ಈ ಬಗ್ಗೆ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ‘ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಜತೆಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆಗೂಡಿ ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಜನಪ್ರತಿನಿಧಿಗಳೊಂದಿಗೆ ಮಂಡಿಸಲಾಗುತ್ತದೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾವಿಸಿ ಬಗೆಹರಿಸುವ ನಿಟ್ಟಿನಲ್ಲಿ ಹಕ್ಕೊತ್ತಾಯ ಮಂಡಿಸಲಾಗುತ್ತಿದೆ. ಗ್ರಾಮಪಂಚಾಯಿತಿಗಳಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಳ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಲೋಪದೋಷಗಳು, ಸಾಮಾಜಿಕ ಪರಿಶೋದನೆಯ ಬಗ್ಗೆ ಮತ್ತು ಕೇರಳ ಮಾದರಿಯ ಯೋಜನೆ ರೂಪಿಸಲು ಕ್ರಮ, ಸಿಬ್ಬಂದಿ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬ, ತಾಲೂಕಿನ ಅರ್ಧಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿಗಳ ಅಧಿಕಾರಿಗಳು ಇಲ್ಲದಿರುವುದು ಸೇರಿದಂತೆ ಹಲವು ವಿಚಾರಗಳ ಪ್ರಸ್ತಾವನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

Related posts

ಮದ್ದಿಗೆಂದು ತೆರಳಿದ್ದ ನವವಿವಾಹಿತೆ ನಾಪತ್ತೆ: ಪತಿಯಿಂದ ಪೊಲೀಸ್ ಕಂಪ್ಲೆಂಟ್,ದೂರಿನಲ್ಲೇನಿದೆ?

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಆರ್ಭಟ ಸಾಧ್ಯತೆ, ನಾಳೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸುಳ್ಯ: ನಿಯಂತ್ರಣ ಕಳೆದುಕೊಂಡ ಚಾಲಕ..! ಸೋಣಂಗೇರಿಯಲ್ಲಿ ಕಾರುಗಳ ನಡುವೆ ಅಪಘಾತ