ಕರಾವಳಿರಾಜಕೀಯವೈರಲ್ ನ್ಯೂಸ್

ದೆಹಲಿಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಖಡಕ್ ಸೂಚನೆ? ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದ ಡಿ.ವಿ.ಎಸ್ ನನ್ನು ಹೈಕಮಾಂಡ್ ಕರೆಸಿದ್ದೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಕಮಲ-ದಳ ನಾಯಕರಲ್ಲೇ ಮೈತ್ರಿ ಗೆ ವಿರೋಧಿಸಿ ಬಹಿರಂಗವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡರು ಅಸಮಾಧಾನ ಹೊರಹಾಕಿದ್ದರು, ಈಗ ಬಿಜೆಪಿ ಹೈಕಮಾಂಡ್‌ ಡಿ,ವಿ ಸದಾನಂದ ಗೌಡ ದೆಹಲಿಗೆ ಬರುವಂತೆ ಹೇಳಿದೆ ಎನ್ನಲಾಗಿದೆ.

ಅಕ್ಟೋಬರ್‌ 25 ರಂದು ದೆಹಲಿ ಬಂದು ಭೇಟಿ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ದೆಹಲಿಗೆ ತೆರಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿಒದ್ದು, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನವನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿಯಾಗಿ ತಂತ್ರಗಾರಿಕೆಯನ್ನ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ನೀಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರ ಮಾಡಿಕೊಂಡಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿವಿ ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು.

ಈಗಾಗಲೇ ಜೆಡಿಎಸ್‌ ಜೊತೆಗಿನ ಮೈತ್ರಿಯಿಂದಾಗಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರ್ತಾರಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಡಿ ವಿ ಸದಾನಂದಗೌಡ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದ ಆಡಳಿತರೂಢ ಕಾಂಗ್ರೆಸ್‌ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರೇ ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದರಾದ ಸದಾನಂದಗೌಡ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

Related posts

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ರಂಜಿನಿ ಎಡಮಂಗಲ ಆಯ್ಕೆ

ರಸ್ತೆ ಮೇಲೆ ಗುಂಡಿಯೋ? ಗುಂಡಿ ಮೇಲೆ ರಸ್ತೆಯೋ..?

ಶಾಲಾ ಬಾಲಕಿಯ ಸೈಕಲ್ ಹಿಂಬಾಲಿಸಿ ರಸ್ತೆಯಲ್ಲಿ ಅನುಚಿತವಾಗಿ ವರ್ತಿಸಿದ ಪೊಲೀಸ್ ಅಮಾನತ್ತು! ಇಲ್ಲಿದೆ ವೈರಲ್ ವಿಡಿಯೋ