Latestಕ್ರೈಂಸುಳ್ಯ

ದಿಲ್ಲಿಯಿಂದ ಕೊರಿಯರ್ ನಲ್ಲಿ ಡ್ರಗ್ಸ್ ತರಿಸಿಕೊಂಡು ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ..!, ಸುಳ್ಯದ ವ್ಯಕ್ತಿ ಸಿಸಿಬಿ ಪೊಲೀಸರ ಬಲೆಗೆ

3.3k

ನ್ಯೂಸ್ ನಾಟೌಟ್: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಕೊರಿಯರ್ ಮೂಲಕ ದೆಹಲಿಯಿಂದ ತರಿಸಿಕೊಂಡು ಮಂಗಳೂರಿನ ಲಾಲ್ ಭಾಗ್ ಬಾಗ್ ನಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಶ್ರಫ್ ಆಲಂತಡ್ಕ (50 ವರ್ಷ) ಎಂದು ಗುರುತಿಸಲಾಗಿದೆ. ಈತ ಸುಳ್ಯದ ಪೆರುವಾಜೆ ಗ್ರಾಮದ ಮಣಿಕ್ಕರ ಆಲಂತಡ್ಕ ನಿವಾಸಿ ಎಂದು ತಿಳಿದು ಬಂದಿದೆ.

ಆತನಿಂದ 11 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿ ವಶಕ್ಕೆ ಪಡೆದು ಆತನ ವಶದಿಂದ ರೂ. 1 ಲಕ್ಷ ಮೌಲ್ಯದ 11 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಆಕ್ಟಿವಾ ಸ್ಕೂಟರ್ ಸಹಿತ ಒಟ್ಟು ರೂ. 1,60,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯು ದೆಹಲಿಯಿಂದ ತನ್ನ ಸ್ನೇಹಿತನ ಮೂಲಕ ಎಂಡಿಎಂಎ ಡ್ರಗ್ಸ್ ಖರೀದಿಸಿ ಅದನ್ನು ತನ್ನ ಊರಾದ ಸುಳ್ಯದ ವಿಳಾಸಕ್ಕೆ ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದ. ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಬಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂವಿ, ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ.ವಿ, ರಾಮ ಹಾಗೂ ಸಿಸಿಬಿ ಸಿಬ್ಬಂದಿ ಕೈಗೊಂಡಿದ್ದರು.

See also  ರಿಪೇರಿ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget