ಕರಾವಳಿಶಿಕ್ಷಣ

ಡೆಂಗ್ಯೂ ಹೆಚ್ಚಳದ ಬಗ್ಗೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಡೆಂಗ್ಯೂ ಮುಂತಾದ ರೋಗಗಳ ಕುರಿತು ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಸ್ತುತ ಡೆಂಗ್ಯೂ, ಚಿಕನ್‌ ಗುನ್ಯ ಮುಂತಾದ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಈ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಉಲ್ಲೇಖ ಮಾಡಿ ಸುತ್ತೋಲೆ ಹೊರಡಿಸಿದೆ.

ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸತಕ್ಕದ್ದು ಮತ್ತು ಇಂತಹ ಸನ್ನಿವೇಶಗಳ ಹತ್ತಿರ ಶಾಲಾ ವಿದ್ಯಾರ್ಥಿಗಳು ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು ಹಾಗೂ ಇವುಗಳನ್ನು ತೆರವುಗೊಳಿಸಲು ಹಾಗೂ ವಿಲೇವಾರಿ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ತಿಳಿಸಿದ್ದಾರೆ.

Click 👇

https://newsnotout.com/2024/07/boy-touches-ibx-wire-kannada-news-19-year-old-nomore
https://newsnotout.com/2024/07/babbu-swami-daiva-kannada-news-theft-kannada-news-tulunadu
https://newsnotout.com/2024/07/elephant-no-more-viral-video-due-to-rail-collision-kannda-news-assam
https://newsnotout.com/2024/07/forest-department-kannada-news-elephant-issue-in-deserve-forest-area
https://newsnotout.com/2024/07/kmf-kananda-news-election-for-congress-and-bjp-kannada-news

Related posts

ಚಂದನ ವಾಹಿನಿಯ ‘ಥಟ್ ಅಂತ ಹೇಳಿ’ ನಲ್ಲಿ ಸುಳ್ಯದ ವೈದ್ಯೆಯ ಪುಸ್ತಕ ಪರಿಚಯ, ಡಾ | ವೀಣಾ ಬರೆದ ಆ ಪುಸ್ತಕದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ಓದಿ

ಕ್ರಿಕೆಟ್ ವಿಶ್ವಕಪ್ ಕಿರೀಟ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಭಾರತದವರು..!ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾದ ದ.ಕ. ಜಿಲ್ಲೆಯ ಕಿನ್ನಿಗೋಳಿ ಮೂಲದ ಯುವತಿಯ ಸ್ಫೂರ್ತಿ ಕಥೆ ಇಲ್ಲಿದೆ ಓದಿ…

ಸಂಪಾಜೆ: ನಿಯಂತ್ರಣ ತಪ್ಪಿ ಕಬ್ಬಿನ ಗದ್ದೆಗೆ ನುಗ್ಗಿದ ಕಾರು, ಸ್ವಲ್ಪದರಲ್ಲೇ ತಪ್ಪಿದ ದುರಂತ