ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿ ದೇವೇಗೌಡರ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಕೆಲ ಸಮಯದ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ದೇವೇಗೌಡ ಅವರು ಕೆಲವು ನೀರಾವರಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಜನತಾ ಪರಿವಾರದವರಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದ ಹಿರಿಯರಾದ ದೇವೇಗೌಡರ ಆಶೀರ್ವಾದ ಪಡೆದಿದ್ದಾರೆ ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್ ಡಿ ರೇವಣ್ಣ ವಿ.ಸೋಮಣ್ಣ ಉಪಸ್ಥಿತರಿದ್ದರು.