ರಾಜಕೀಯವೈರಲ್ ನ್ಯೂಸ್

ದೇವೇಗೌಡರ ಶಾಪವನ್ನು ನೆನಪಿಸಿಕೊಂಡದ್ದೇಕೆ ಸಿಎಂ ಸಿದ್ದರಾಮಯ್ಯ..? ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದ ಸಿಎಂ ಸಿದ್ದು!

261

ನ್ಯೂಸ್ ನಾಟೌಟ್: ನನ್ನ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಸಿಎಂ, ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಘ ದೋಷದ ಫಲ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡ ನಾನು ಬಯಸುತ್ತೇನೆ. ಹಾಗು ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಪಕ್ಷ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕು. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ತಿಳಿಸಿದ್ದಾರೆ. ಈಗ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.

See also  ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಲಿ ಭಾರತ ಎಂದು ಫ್ರಾನ್ಸ್ ಅಧ್ಯಕ್ಷರ ಒತ್ತಾಯ ..! ಚೀನಾ ವಿರೋಧ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget