ರಾಜಕೀಯ

ಬ್ರಹ್ಮ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ

267

ನ್ಯೂಸ್ ನಾಟೌಟ್: ಫೆ.17 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಅದರಲ್ಲೂ ಬಿಲ್ಲವ ಸಮುದಾಯದ ಅಭಿವೃದ್ಧಿ ಕಾರ್ಯಗಳ ಕೆಲವು ಘೋಷಣೆಗನ್ನು ಮಂಡಿಸಿದ್ದರು.

ಅದಕ್ಕೆ ಪೂರಕ ಎನ್ನುವಂತೆ ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ.

ಅದರನ್ವಯ ಪವರ್ಗ 2’ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಷಾಹಿನ್ ಪರ್ವಿನ್ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಕುರಿತಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನಿಲ್ ಕುಮಾರ್, ”ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಬರೆದುಕೊಂಡಿದ್ದಾರೆ.

See also  ಚಹಾ ಮಾರುತ್ತಿದ್ದ ಬಡ ಮಹಿಳೆ ಗ್ರಾ.ಪಂ. ಅಧ್ಯಕ್ಷೆಯಾಗಿ ಆಯ್ಕೆ..! ಅವಿರೋಧ ಆಯ್ಕೆಯ ಬಗ್ಗೆ ಆಕೆ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget